ವಿಜಯಪುರ: ರಾಜ್ಯ ಸರ್ಕಾರದ ಹೆಮ್ಮೆಯ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಗೊಳಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ (MB Patil) ಹೇಳಿದ್ದಾರೆ.
ಅನ್ನಭಾಗ್ಯದಿಂದ 16 ಲಕ್ಷ ಜನರಿಗೆ ಸಹಾಯ
ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಹೆಸರು ತಂದು ಕೊಟ್ಟಿದ್ದು ಈ ಪಂಚ ಗ್ಯಾರಂಟಿ ಯೋಜನೆಗಳು. ಈ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಿಂದ ಜಿಲ್ಲೆಯ ಒಟ್ಟು 16 ಲಕ್ಷ 55 ಸಾವಿರ ಜನ ಫಲಾನುಭವಿಗಳಿಗೆ ಸಹಾಯಕವಾಗಿದೆ. ಈ ವರೆಗೆ 457 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ತಿಳಿಸಿದರು.
ಗೃಹಲಕ್ಷ್ಮೀ ಯೋಜನೆಯಡಿ 5 ಲಕ್ಷ ಫಲಾನುಭವಿಗಳಿಗೆ ಅನುಕೂಲ
ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯ ಒಟ್ಟು 5 ಲಕ್ಷ 3 ಸಾವಿರ ಫಲಾನುಭವಿಗಳಿಗೆ ಅನುಕೂಲವಾಗಿದೆ. ಇಲ್ಲಿಯ 184 ಕೋಟಿ 34 ಲಕ್ಷ ರೂಪಾಯಿ ಪಾವತಿಸಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದರು.
ಇದನ್ನೂ ಓದಿ: ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದಾರೆ: ದಿನೇಶ್ ಗುಂಡೂರಾವ್
