DK Shivakumar: ನರೇಗಾ ಉಳಿಸಲು ಇಂದು ಕಾಂಗ್ರೆಸ್‌ ಪ್ರತಿಭಟನೆ, ಪಂಚಾಯಿತಿ ಮಟ್ಟದಲ್ಲೂ ಹೋರಾಟ: ಡಿಕೆ ಶಿವಕುಮಾರ್

congress protest against narega name change says dk shivakumar

ಬೆಂಗಳೂರು:  ನರೇಗಾ ಉಳಿಸುವ ಸಲುವಾಗಿ ಕಾಂಗ್ರೆಸ್‌ ವತಿಯಿಂದ ಇಂದು ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ತಿಳಿಸಿದ್ದಾರೆ.

ಪಂಚಾಯಿತಿ ಮಟ್ಟದಲ್ಲೂ ಹೋರಾಟ

ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರತಿ ಪಂಚಾಯಿತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕೆಹೇಳಿದ್ದಾರೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಆರಂಭವಾದ ಯೋಜನೆ, ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು. ಆದರೆ, ಈ ಹಕ್ಕು ಈಗ ಮೊಟಕಾಗಿದೆ ಎಂದು ಆರೋಪಿಸಿದ ಅವರು, ದೇಶದ ಉದ್ದಗಲಕ್ಕೂ ಹೋರಾಟ ರೂಪಿಸಲಾಗಿದೆ ಎಂದು ಹೇಳಿದ್ದಾರೆ.

ಸಂವಿಧಾನದ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ

ಸಂವಿಧಾನ ಪೀಠಿಕೆ ಓದು ಅಭಿಯಾನದ ಮೂಲಕ ಹೊಸ ಪೀಳಿಗೆಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಸಂವಿಧಾನದ ರಕ್ಷಣೆಗೆ ನಮ್ಮ ಸರ್ಕಾರ ಪ್ರತಿ ಹಂತದಲ್ಲೂ ಬದ್ದವಾಗಿದೆ ಎಂದು ಹೇಳಿದರು.

ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದಾರೆ

ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದು, ಬಿಜೆಪಿಯ ಮಾರ್ಗದರ್ಶನದಂತೆ ನಡೆಯುತ್ತಿದ್ದಾರೆ ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಆರೋಪ ಮಾಡಿದ್ದಾರೆ. ರಾಜ್ಯಪಾಲರು ನಮ್ಮ ಸರ್ಕಾರದ ಪ್ರತಿನಿಧಿ ಅವರ ಭಾಷಣ ಎಂದರೆ ಅದು ಸರ್ಕಾರದ ಭಾಷಣವೇ ಹೊರತು ಅವರ ವೈಯಕ್ತಿಕ ಅಭಿಪ್ರಾಯ ಅಲ್ಲ. ಸರ್ಕಾರದ ಉದ್ದೇಶ ಮತ್ತು ಸಾಧನೆಗಳನ್ನು ಹೇಳುವುದು ಅವರ ಜವಾಬ್ದಾರಿ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಇದನ್ನೂ ಓದಿ: ರಾಜ್ಯ ಸರ್ಕಾರ ರೈತರಿಗೆ ವಂಚನೆ ಮಾಡುತ್ತಿದೆ: ಎಚ್‌ಡಿ ಕುಮಾರಸ್ವಾಮಿ

Leave a Reply

Your email address will not be published. Required fields are marked *