Ashu Reddy: ಮದುವೆ ಹೆಸರಲ್ಲಿ ಉದ್ಯಮಿಗೆ 9 ಕೋಟಿ ವಂಚಿಸಿದ ನಟಿ

actress Ashu Reddy 9 crores fraud case

ಹೈದರಾಬಾದ್‌: ತೆಲುಗು ಚಿತ್ರರಂಗದ ನಟಿ ಮತ್ತು ಸಾಮಾಜಿಕ ಜಾಲತಾಣದ ತಾರೆ ಅಶು ರೆಡ್ಡಿ(Ashu Reddy) ಅವರು 9 ಕೋಟಿ ರೂಪಾಯಿಗೂ ಅಧಿಕ ಹಣದ ವಂಚನೆ ಪ್ರಕರಣದಲ್ಲಿ ಸುದ್ದಿಯಾಗಿದ್ದಾರೆ. ಹೈದರಾಬಾದ್‌ನ ಸೆಂಟ್ರಲ್ ಕ್ರೈಮ್ ಸ್ಟೇಷನ್ (CCS) ಪೊಲೀಸರು ನಟಿ ಮತ್ತು ಅವರ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬ ವರದಿಗಳು ಹೊರಬಿದ್ದಿದ್ದವು. ಲಂಡನ್‌ನಲ್ಲಿ ನೆಲೆಸಿರುವ ಸಾಫ್ಟ್‌ವೇರ್ ಎಂಜಿನಿಯರ್ ಯುವಿ ಧರ್ಮೇಂದ್ರ ಅವರು ನೀಡಿದ ದೂರಿನನ್ವಯ ಈ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿತ್ತು.

ಏನಿದು ಪ್ರಕರಣ?

ದೂರಿನಲ್ಲಿ ಉಲ್ಲೇಖಿಸಿರುವ ಪ್ರಕಾರ, 2018ರಲ್ಲಿ ಪರಿಚಯವಾದ ಇವರಿಬ್ಬರ ನಡುವೆ ಪ್ರೇಮ ಸಂಬಂಧ ಬೆಳೆದಿತ್ತು. ಮದುವೆಯಾಗುವುದಾಗಿ ನಂಬಿಸಿ ಅಶು ರೆಡ್ಡಿ ಅವರು ತನ್ನಿಂದ ದೊಡ್ಡ ಮೊತ್ತದ ಹಣ, ಚಿನ್ನಾಭರಣ ಮತ್ತು ಆಸ್ತಿಯನ್ನು ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂಬುದು ದೂರುದಾರರ ಆರೋಪ. ಹಲವು ವರ್ಷಗಳ ಸಂಬಂಧದ ನಂತರ ಮದುವೆಯಾಗದೇ ನಟಿ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಆರೋಪ ತಳ್ಳಿ ಹಾಕಿದ ನಟಿ

ಆದರೆ, ಈ ಎಲ್ಲಾ ಗಂಭೀರ ಆರೋಪಗಳನ್ನು ನಟಿ ಅಶು ರೆಡ್ಡಿ ತೀವ್ರವಾಗಿ ತಳ್ಳಿಹಾಕಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಸ್ಪಷ್ಟನೆ ನೀಡಿರುವ ಅವರು, ತಮ್ಮ ವಿರುದ್ಧ ಹರಿದಾಡುತ್ತಿರುವ ವರದಿಗಳು ಸುಳ್ಳು ಮತ್ತು ಜನರನ್ನು ದಾರಿ ತಪ್ಪಿಸುವ ಉದ್ದೇಶವನ್ನು ಹೊಂದಿವೆ ಎಂದು ಹೇಳಿದ್ದಾರೆ. ಇಂತಹ ಆಧಾರರಹಿತ ಮತ್ತು ಸುಳ್ಳು ಸುದ್ದಿಗಳನ್ನು ಹರಡುವ ವ್ಯಕ್ತಿಗಳು ಹಾಗೂ ಮಾಧ್ಯಮಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಶು ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

‘ಚಲ್ ಮೋಹನ್ ರಂಗ’, ‘ಫೋಕಸ್’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಅಶು ರೆಡ್ಡಿ, ಬಿಗ್ ಬಾಸ್ ಮೂಲಕ ಹೆಚ್ಚು ಜನಪ್ರಿಯರಾಗಿದ್ದರು. ಪ್ರಸ್ತುತ ಅವರು ‘ಸರ್ಕಸ್ ಕಾರ್ 2’ ಮತ್ತು ‘ತ್ರಿಮುಖ’ದಂತಹ ಚಿತ್ರಗಳ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಕರಣವು ಇದೀಗ ಕಾನೂನು ಪ್ರಕ್ರಿಯೆಯ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಸತ್ಯಾಂಶ ಹೊರಬರಬೇಕಿದೆ.

ಇದನ್ನೂ ಓದಿ: ಕಾಂತಾರ ದೈವದ ಕುರಿತು ಅವಹೇಳನಕಾರಿ ಹೇಳಿಕೆ, ಹೈಕೋರ್ಟ್‌ನಲ್ಲಿ ಬೇಷರತ್ ಕ್ಷಮೆ ಕೋರಿದ ನಟ ರಣವೀರ್ ಸಿಂಗ್

Leave a Reply

Your email address will not be published. Required fields are marked *