DK Shivakumar: ಗ್ಯಾರಂಟಿ ಯೋಜನೆಗಳೇ ನಮ್ಮ ಗೆಲುವಿನ ಶ್ರೀರಕ್ಷೆ: ಡಿಕೆಶಿ
ಬೆಂಗಳೂರು: ಕರ್ನಾಟಕದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಸಾಧಿಸಿರುವ ಯಶಸ್ಸಿಗೆ ರಾಜ್ಯ ಸರ್ಕಾರದ ಜನಕಲ್ಯಾಣ ಯೋಜನೆಗಳೇ ಮೂಲಕಾರಣ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ವಿಶ್ಲೇಷಿಸಿದ್ದಾರೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಕೇರಳದಲ್ಲಿ ಆಡಳಿತ ವಿರೋಧಿ ಅಲೆಯ ನಡುವೆ ಯುಡಿಎಫ್ ಮೈತ್ರಿಕೂಟ ಸಾಧಿಸಿರುವ ವಿಜಯವು ನಿರೀಕ್ಷಿತವಾಗಿತ್ತು ಎಂದು ಅಭಿಪ್ರಾಯಪಟ್ಟರು. ದಾವಣಗೆರೆ ದಕ್ಷಿಣದ ಫಲಿತಾಂಶದ ವಿಶ್ಲೇಷಣೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಗೆಲುವಿನ ಬಗ್ಗೆ ಮಾತನಾಡಿದ ಡಿಸಿಎಂ, “ಕ್ಷೇತ್ರದಲ್ಲಿ ಹಲವು ಗೊಂದಲಗಳಿದ್ದರೂ ಕಾಂಗ್ರೆಸ್ ಅಭ್ಯರ್ಥಿ ಸುಲಭವಾಗಿ ಗೆಲ್ಲುತ್ತಾರೆ ಎಂಬ…
