Basavaraj Bommai: ಅಡುಗೆ ಅನಿಲ ವಿಚಾರದಲ್ಲಿ ರಾಜಕೀಯ ಬೇಡ: ಬಸವರಾಜ್‌ ಬೊಮ್ಮಾಯಿ

Basavaraj Bommai slams state government over cylinder fake information

ಬೆಂಗಳೂರು: ಅಡುಗೆ ಅನಿಲದ ಸಮಸ್ಯೆಯನ್ನು ವಿರೋಧಪಕ್ಷಗಳು ರಾಜಕೀಯಗೊಳಿಸುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ.

ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೊಮ್ಮಾಯಿ

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕೇವಲ ಕರ್ನಾಟಕಕ್ಕೆ ಸೀಮಿತವಾದ ಸಮಸ್ಯೆಯಲ್ಲ ಎಂದು ಸ್ಪಷ್ಟಪಡಿಸಿದರು.  ರಾಜ್ಯದಲ್ಲಿ ಪರಿಶಿಷ್ಟ ಸಮುದಾಯದ ಒಳಮೀಸಲಾತಿ ಜಾರಿ ಮಾಡಲು ವಿಶೇಷ ಸಂಪುಟ ಸಭೆಯ ಅಗತ್ಯವಿಲ್ಲ. ಸರ್ಕಾರಕ್ಕೆ ನಿಜವಾದ ಬದ್ಧತೆ ಇದ್ದರೆ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿ ಆಧರಿಸಿ ಕೂಡಲೇ ಒಳಮೀಸಲಾತಿ ಜಾರಿ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. 

ಆರೋಪಗಳ ಸುರಿಮಳೆ

ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟ ಸುಮಾರು 60 ಸಾವಿರ ಕೋಟಿ ರೂಪಾಯಿ ಬೇರೆ ಉದ್ದೇಶಗಳಿಗೆ ಬಳಕೆಯಾಗಿದೆ. ಮೀಸಲಾತಿಯ ಬಗ್ಗೆ ಸ್ಪಷ್ಟತೆ ಇಲ್ಲದೆಯೇ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಬೊಮ್ಮಾಯಿ ಅವರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ: ಸಿಎಂ ಸಿದ್ದರಾಮಯ್ಯ

Leave a Reply

Your email address will not be published. Required fields are marked *