TOP NEWS

Big News: ಮಾಜಿ ಪ್ರಧಾನಿ ಪತ್ನಿ ಚೆನ್ನಮ್ಮ ವಿಧಿವಶ: ಕಂಬನಿ ಮಿಡಿದ ರಾಜಕೀಯ ನಾಯಕರು

Big news Politicians Mourn the Passing of Chennamma Deve Gowda

ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿಮ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ (Chennamma Deve Gowda)  ಅವರು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಇದೀಗ ಚೆನ್ನಮ್ಮ ಅವರ ನಿಧನಕ್ಕೆ ಅನೇಕ ಗಣ್ಯರು (Big News) ಸಂತಾಪ ಸೂಚಿಸಿದ್ದು, ಮಾಜಿ ಸಿಎಂ ಸೇರಿದಂತೆ ಅನೇಕರು ಕಂಬಿನಿ ಮಿಡಿದಿದ್ದಾರೆ.

ಅನೇಕ ರಾಜಕೀಯ ನಾಯಕರು ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದು, ಚೆನ್ನಮ್ಮ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನದಿಂದ ದುಃಖಿತನಾಗಿದ್ದೇನೆ. ಜನತಾ ಪರಿವಾರದಲ್ಲಿದ್ದ ನಾನು ದೇವೇಗೌಡರ ಕುಟುಂಬದೊಂದಿಗೆ ನಿಕಟವಾದ ಒಡನಾಟ ಇಟ್ಟುಕೊಂಡವನಾಗಿ ಚೆನ್ನಮ್ಮನವರನ್ನು‌ ಸಮೀಪದಿಂದ ಬಲ್ಲವನು.

ಚೆನ್ನಮ್ಮನವರು ತಮ್ಮ ಜೀವನದಲ್ಲಿ ಎದುರಾದ ಕಷ್ಟ – ನೋವುಗಳಿಂದ ಕುಗ್ಗದೆ, ಎಲ್ಲವನ್ನೂ ಧೈರ್ಯದಿಂದ ಎದುರಿಸಿದ್ದ… pic.twitter.com/9iyqxhVMy9

— Siddaramaiah (@siddaramaiah) July 18, 2026

ಚೆನ್ನಮ್ಮ ಒಬ್ಬ ಆದರ್ಶ ಗೃಹಿಣಿ: ಸಿದ್ದರಾಮಯ್ಯ
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನದಿಂದ ದುಃಖಿತನಾಗಿದ್ದೇನೆ. ಜನತಾ ಪರಿವಾರದಲ್ಲಿದ್ದ ನಾನು ದೇವೇಗೌಡರ ಕುಟುಂಬದೊಂದಿಗೆ ನಿಕಟವಾದ ಒಡನಾಟ ಇಟ್ಟುಕೊಂಡವನಾಗಿ ಚೆನ್ನಮ್ಮನವರನ್ನು‌ ಸಮೀಪದಿಂದ ಬಲ್ಲವನು. ಚೆನ್ನಮ್ಮನವರು ತಮ್ಮ ಜೀವನದಲ್ಲಿ ಎದುರಾದ ಕಷ್ಟ – ನೋವುಗಳಿಂದ ಕುಗ್ಗದೆ, ಎಲ್ಲವನ್ನೂ ಧೈರ್ಯದಿಂದ ಎದುರಿಸಿದ್ದ ಗಟ್ಟಿಗಿತ್ತಿ. ದೇವೇಗೌಡರ ರಾಜಕೀಯ ಜೀವನದ ಏಳುಬೀಳಿನ ನಡುವೆ ದೊಡ್ಡ ಕುಟುಂಬವನ್ನು ಪೊರೆಯುತ್ತಾ ಬಂದ ಅವರು ಒಬ್ಬ ಆದರ್ಶ ಗೃಹಿಣಿಯಾಗಿದ್ದರು. ಮಾಜಿ ಪ್ರಧಾನಿಗಳ ಮಡದಿಯಾಗಿದ್ದರೂ ಯಾವ ಹಮ್ಮು ಬಿಮ್ಮು ಇಲ್ಲದೆ ಎಲ್ಲರನ್ನೂ ಅಕ್ಕರೆಯಿಂದ ಕಾಣುತ್ತಿದ್ದ ಚೆನ್ನಮ್ಮನವರು, ಮಾದರಿ ಸತಿಯಾಗಿ ತುಂಬು ಜೀವನ ಸಾಗಿಸಿದವರು. ದೀರ್ಘಕಾಲದ ಸಂಗಾತಿಯನ್ನು ಈ ಇಳಿವಯಸ್ಸಿನಲ್ಲಿ ಕಳೆದುಕೊಂಡ ದೇವೇಗೌಡರಿಗೆ ದು:ಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ. ಗೌಡರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಅವರ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ.

ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ ದೇವೇಗೌಡ ಅವರ ಧರ್ಮಪತ್ನಿ ಹಾಗೂ ಅತ್ಯಂತ ಸರಳ-ಸಜ್ಜನಿಕೆಯ ಮನೋಭಾವದವರಾಗಿದ್ದ ಶ್ರೀಮತಿ ಚೆನ್ನಮ್ಮ ಅವರು ದೈವಾಧೀನರಾದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಅಘಾತವಾಗಿದೆ.

ಶ್ರೀ ಹೆಚ್.ಡಿ ದೇವೇಗೌಡ ಅವರ ಯಶಸ್ವಿ ರಾಜಕಾರಣದಲ್ಲಿ ಶ್ರೀಯುತರ ಪಾತ್ರವೂ ಅಪೂರ್ವವಾಗಿತ್ತು. ನಮ್ಮ ಮಾರ್ಗದರ್ಶಕರಾದ… pic.twitter.com/baAUYQTtva

— V. Somanna (@VSOMANNA_BJP) July 18, 2026

ನೆನಪು ನಮ್ಮೆಲ್ಲರಲ್ಲಿ ಸದಾ ಚಿರಸ್ಮರಣೀಯವಾಗಿರಲಿದೆ: ವಿ ಸೋಮಣ್ಣ
ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ ದೇವೇಗೌಡ ಅವರ ಧರ್ಮಪತ್ನಿ ಹಾಗೂ ಅತ್ಯಂತ ಸರಳ-ಸಜ್ಜನಿಕೆಯ ಮನೋಭಾವದವರಾಗಿದ್ದ ಶ್ರೀಮತಿ ಚೆನ್ನಮ್ಮ ಅವರು ದೈವಾಧೀನರಾದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಅಘಾತವಾಗಿದೆ. ಶ್ರೀ ಹೆಚ್.ಡಿ ದೇವೇಗೌಡ ಅವರ ಯಶಸ್ವಿ ರಾಜಕಾರಣದಲ್ಲಿ ಶ್ರೀಯುತರ ಪಾತ್ರವೂ ಅಪೂರ್ವವಾಗಿತ್ತು. ನಮ್ಮ ಮಾರ್ಗದರ್ಶಕರಾದ ದೇವೇಗೌಡರೊಂದಿಗೆ ಮನೆಗೆ ತೆರಳಿದಾಗಲೆಲ್ಲ ಅವರು ನೀಡಿದ್ದ ಆತಿಥ್ಯ ಸದಾ ನಮ್ಮ ತಾಯಿಯವರನ್ನು ನೆನಪಿಸಿದಂತಾಗುತ್ತಿತ್ತು. ಅವರ ನೆನಪು ನಮ್ಮೆಲ್ಲರಲ್ಲಿ ಸದಾ ಚಿರಸ್ಮರಣೀಯವಾಗಿರಲಿದೆ. ಶ್ರೀ ದೇವೇಗೌಡರು ಹಾಗೂ ಅವರ ಕುಟುಂಬಕ್ಕೆ ಹಾಗೂ ಅಪಾರ ಬಂಧುಗಳು, ಅಭಿಮಾನಿಗಳಿಗೆ ಆ ಭಗವಂತ ಈ ತೀವ್ರ ದುಃಖದ ಸಂದರ್ಭದಲ್ಲಿ ಹೆಚ್ಚಿನ ಶಕ್ತಿಯನ್ನು ನೀಡಲಿ. ಶ್ರೀಯುತರ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ

ತಾಳ್ಮೆಯ ಸಾಕಾರಮೂರ್ತಿ: ಪ್ರಲ್ಹಾದ್ ಜೋಶಿ
ಮಾಜಿ ಪ್ರಧಾನಿ ಶ್ರೀ ಹೆಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರು ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಸರಳತೆ ಹಾಗೂ ತಾಳ್ಮೆಯ ಸಾಕಾರಮೂರ್ತಿಯಾಗಿದ್ದ ಅವರು, ಶ್ರೀ ದೇವೇಗೌಡರ ಸುದೀರ್ಘ ಸಾರ್ವಜನಿಕ ಜೀವನಕ್ಕೆ ಭದ್ರ ಬುನಾದಿಯಾಗಿ, ಇಡೀ ಕುಟುಂಬವನ್ನು ಮಮತೆಯಿಂದ ಮುನ್ನಡೆಸಿದ ಆದರ್ಶ ಮಾತೃಶಕ್ತಿಯಾಗಿದ್ದರು. ಅವರ ಅಗಲಿಕೆ ಗೌಡರ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿ ಬಳಗಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ, ಈ ಅಪಾರ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ

ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ ದೇವೇಗೌಡ ಅವರ ಧರ್ಮಪತ್ನಿ, ಸರಳತೆಯ ಸಾಕಾರಮೂರ್ತಿಗಳಾಗಿದ್ದ ಶ್ರೀಮತಿ ಚೆನ್ನಮ್ಮ ಅವರು ದೈವಾಧೀನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ.

ಸಾರ್ವಜನಿಕ ಜೀವನದಿಂದ ಶ್ರೀಮತಿ ಚೆನ್ನಮ್ಮ ಅವರು ಅಂತರವನ್ನು ಕಾಪಾಡಿಕೊಂಡು, ಶ್ರೀ ಹೆಚ್. ಡಿ ದೇವೇಗೌಡ ಅವರ ಜನಸೇವಾ ರಾಜಕಾರಣಕ್ಕೆ ಅತಿದೊಡ್ಡ ಶಕ್ತಿಯಾಗಿ… pic.twitter.com/UphjS9EEdE

— Shobha Karandlaje (@ShobhaBJP) July 18, 2026

ದೇವೇಗೌಡರ ರಾಜಕಾರಣಕ್ಕೆ ಅತಿದೊಡ್ಡ ಶಕ್ತಿ: ಶೋಭಾ ಕರಂದ್ಲಾಜೆ
ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ ದೇವೇಗೌಡ ಅವರ ಧರ್ಮಪತ್ನಿ, ಸರಳತೆಯ ಸಾಕಾರಮೂರ್ತಿಗಳಾಗಿದ್ದ ಶ್ರೀಮತಿ ಚೆನ್ನಮ್ಮ ಅವರು ದೈವಾಧೀನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಸಾರ್ವಜನಿಕ ಜೀವನದಿಂದ ಶ್ರೀಮತಿ ಚೆನ್ನಮ್ಮ ಅವರು ಅಂತರವನ್ನು ಕಾಪಾಡಿಕೊಂಡು, ಶ್ರೀ ಹೆಚ್. ಡಿ ದೇವೇಗೌಡ ಅವರ ಜನಸೇವಾ ರಾಜಕಾರಣಕ್ಕೆ ಅತಿದೊಡ್ಡ ಶಕ್ತಿಯಾಗಿ ನಿಂತಿದ್ದರು. ಶ್ರೀಯುತರ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ. ಶ್ರೀ ಹೆಚ್.ಡಿ ದೇವೇಗೌಡ ಅವರಿಗೆ ಹಾಗೂ ಅವರ ಕುಟುಂಬಕ್ಕೆ, ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಮಾಜಿ ಪ್ರಧಾನ ಮಂತ್ರಿಗಳಾದ ಶ್ರೀ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವಾಯಿತು. ಅವರ ಸರಳತೆ, ಸಹನೆ ಹಾಗೂ ತಮ್ಮ ಕುಟುಂಬಕ್ಕೆ ನೀಡಿದ ಅಚಲ ಬೆಂಬಲ ಸದಾ ಸ್ಮರಣೀಯವಾದದ್ದು.

​ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ದೇವೇಗೌಡರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಈ ಅಗಲಿಕೆಯ… pic.twitter.com/21IxspQON1

— Laxmi Hebbalkar (@laxmi_hebbalkar) July 18, 2026

ಆತ್ಮಕ್ಕೆ ಚಿರಶಾಂತಿ ನೀಡಲಿ: ಲಕ್ಷ್ಮಿ ಹೆಬ್ಬಾಳ್ಕರ್
ಮಾಜಿ ಪ್ರಧಾನ ಮಂತ್ರಿಗಳಾದ ಶ್ರೀ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವಾಯಿತು. ಅವರ ಸರಳತೆ, ಸಹನೆ ಹಾಗೂ ತಮ್ಮ ಕುಟುಂಬಕ್ಕೆ ನೀಡಿದ ಅಚಲ ಬೆಂಬಲ ಸದಾ ಸ್ಮರಣೀಯವಾದದ್ದು. ​ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ದೇವೇಗೌಡರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಈ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡ ಅವರ ಪತ್ನಿ ಶ್ರೀಮತಿ ಚೆನ್ನಮ್ಮ ಅವರು ನಿಧನರಾದ ಸುದ್ದಿ‌ ಕೇಳಿ ದುಃಖವಾಯಿತು.

ಮೃತರ ಆತ್ಮಕ್ಕೆ ಶಾಂತಿ‌ ಸಿಗಲಿ. ಅವರ ಬಂಧುಗಳು, ಕುಟುಂಬವರ್ಗದವರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ.#ಓಂಶಾಂತಿ pic.twitter.com/uVlvZREIgW

— HK Patil (@HKPatilINC) July 18, 2026

ಬಹಳ ನೋವಾಯಿತು ಎಂದ ಹೆಚ್‌ಕೆ ಪಾಟೀಲ್
ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡ ಅವರ ಪತ್ನಿ ಶ್ರೀಮತಿ ಚೆನ್ನಮ್ಮ ಅವರು ನಿಧನರಾದ ಸುದ್ದಿ‌ ಕೇಳಿ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ‌ ಸಿಗಲಿ. ಅವರ ಬಂಧುಗಳು, ಕುಟುಂಬವರ್ಗದವರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ.

ಮಾಜಿ ಪ್ರಧಾನಿ ಸನ್ಮಾನ್ಯ ಶ್ರೀ @H_D_Devegowda ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮನವರು ವಿಧಿವಶರಾಗಿರುವುದು ತೀವ್ರ ನೋವನ್ನುಂಟು ಮಾಡಿದೆ.

ಆಸ್ಪತೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಾರೆ ಎನ್ನುತ್ತಿರುವಾಗಲೇ ಅವರು ನಮ್ಮೆಲ್ಲರನ್ನು ಅಗಲಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರ ಜೀವನ ಸಂಗಾತಿಯಾಗಿ ಅವರ ಜೀವನದುದ್ದಕ್ಕೂ ಜತೆಗೆ… pic.twitter.com/3OodTEavCi

— Vijayendra Yediyurappa (@BYVijayendra) July 18, 2026

ಎಲೆಮರೆ ಕಾಯಿಯಂತೆ ಇದ್ದವರು: ಬಿವೈ ವಿಜಯೇಂದ್ರ
ಮಾಜಿ ಪ್ರಧಾನಿ ಸನ್ಮಾನ್ಯ ಶ್ರೀ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮನವರು ವಿಧಿವಶರಾಗಿರುವುದು ತೀವ್ರ ನೋವನ್ನುಂಟು ಮಾಡಿದೆ. ಆಸ್ಪತೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಾರೆ ಎನ್ನುತ್ತಿರುವಾಗಲೇ ಅವರು ನಮ್ಮೆಲ್ಲರನ್ನು ಅಗಲಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ಜೀವನ ಸಂಗಾತಿಯಾಗಿ ಅವರ ಜೀವನದುದ್ದಕ್ಕೂ ಜತೆಗೆ ನಿಂತು ಅವರ ಏಳಿಗೆಗೆ ಎಲೆಮರೆ ಕಾಯಿಯಂತೆ ಇದ್ದವರು. 85 ವರ್ಷಗಳ ಸಾರ್ಥಕ ಬದುಕನ್ನು ನಡೆಸಿದ ಮಾತೃ ಸ್ವರೂಪಿ ಚೆನ್ನಮ್ಮನವರು ನಮ್ಮನೆಲ್ಲ ಅಗಲಿರುವುದು ತುಂಬಾ ನೋವಿನ ಸಂಗತಿ.. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಂಟುಂಬಕ್ಕೆ ಭಗವಂತ ದಯಪಾಲಿಸಲಿ ಎಂದು ಪ್ರಾಥಿಸುತ್ತೇನೆ.

ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡರ ಧರ್ಮಪತ್ನಿ, ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿಯವರ ತಾಯಿಯವರಾದ ಶ್ರೀಮತಿ ಚೆನ್ನಮ್ಮ ದೇವೇಗೌಡರ ನಿಧನದ ವಾರ್ತೆ ತಿಳಿದು ಅತ್ಯಂತ ದುಃಖವಾಯಿತು. ತಮ್ಮ ಸರಳತೆ, ಸಂಸ್ಕಾರ ಮತ್ತು ಕುಟುಂಬ ಮೌಲ್ಯಗಳ ಸಾಕಾರ ಮೂರ್ತಿಗಳಾಗಿದ್ದ ತಾಯಿ ಶ್ರೀಮತಿ ಚೆನ್ನಮ್ಮನವರ ಅಗಲಿಕೆಯಿಂದ… pic.twitter.com/JcktKEnRkH

— B Y Raghavendra (@BYRBJP) July 18, 2026

ಕುಟುಂಬ ಮೌಲ್ಯಗಳ ಸಾಕಾರ ಮೂರ್ತಿ: ಬಿವೈ ರಾಘವೇಂದ್ರ
ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡರ ಧರ್ಮಪತ್ನಿ, ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿಯವರ ತಾಯಿಯವರಾದ ಶ್ರೀಮತಿ ಚೆನ್ನಮ್ಮ ದೇವೇಗೌಡರ ನಿಧನದ ವಾರ್ತೆ ತಿಳಿದು ಅತ್ಯಂತ ದುಃಖವಾಯಿತು. ತಮ್ಮ ಸರಳತೆ, ಸಂಸ್ಕಾರ ಮತ್ತು ಕುಟುಂಬ ಮೌಲ್ಯಗಳ ಸಾಕಾರ ಮೂರ್ತಿಗಳಾಗಿದ್ದ ತಾಯಿ ಶ್ರೀಮತಿ ಚೆನ್ನಮ್ಮನವರ ಅಗಲಿಕೆಯಿಂದ ಶ್ರೀ ದೇವೇಗೌಡರ ದೊಡ್ಡ ಕುಟುಂಬ ಮಾತ್ರವಲ್ಲ, ಜೆಡಿಎಸ್ ಪಕ್ಷದ ಕಾರ್ಯಕರ್ತರೂ ಕೂಡ ಮಾತೃಛಾಯೆಯನ್ನು ಕಳೆದುಕೊಂಡಂತಾಗಿದೆ. ಅವರ ಮನೆದೇವರಾದ ಹರದನಹಳ್ಳಿಯ ಶ್ರೀ ಈಶ್ವರ ದೇವರು ತನ್ನ ನೆಚ್ಚಿನ ಭಕ್ತೆಯಾಗಿದ್ದ ಶ್ರೀಮತಿ ಚೆನ್ನಮ್ಮನವರಿಗೆ ಸದ್ಗತಿಯನ್ನು ದಯಪಾಲಿಸಲಿ, ಪೂಜ್ಯ ಮಾತೃಶ್ರೀ ಚೆನ್ನಮ್ಮನವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಶ್ರೀ ದೇವೇಗೌಡರ ಕುಟುಂಬದ ಎಲ್ಲ ಸದಸ್ಯರಿಗೆ, ಅಪಾರ ಬಂಧು-ಬಳಗಕ್ಕೆ ಹಾಗೂ ಎಲ್ಲಾ ಕಾರ್ಯಕರ್ತರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ

ಇದನ್ನೂ ಓದಿ:  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

Leave a Reply

Your email address will not be published. Required fields are marked *