Nitin Nabin: ನಿತಿನ್ ನಬಿನ್ ಅವರನ್ನು ಅಧ್ಯಕ್ಷರಾಗಿ ಅಧಿಕೃತ ಘೋಷಣೆ ಮಾಡಿದ ಬಿಜೆಪಿ

bjp announced Nitin Nabin as new president of party

ನವದೆಹಲಿ: ಇಂದು ದೆಹಲಿಯಲ್ಲಿನ ಭಾರತೀಯ ಜನತ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನಿತಿನ್ ನಬಿನ್ (Nitin Nabin) ಅವರನ್ನು ಔಪಚಾರಿಕವಾಗಿ ಘೋಷಣೆ ಮಾಡಲಾಗಿದೆ.

ಅಧ್ಯಕ್ಷ ಹುದ್ದೆ ಅಲಂಕರಿಸಿದ ಕಿರಿಯ ವ್ಯಕ್ತಿ

ಈ ಕಾರ್ಯಕ್ರಮದಲ್ಲಿ ಬಿಜೆಪಿ ಸಾಂಸ್ಥಿಕ ಚುನಾವಣೆಯ ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರು ಸಾಂಸ್ಥಿಕ ಚುನಾವಣೆಯ ಫಲಿತಾಂಶಗಳನ್ನು ಘೋಷಣೆ ಮಾಡಿದ್ದು,  ಮತ್ತು ಪಕ್ಷದ ಉನ್ನತ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ವ್ಯಕ್ತಿ 45 ವರ್ಷದ ನಿತಿನ್‌ ನಬಿನ್ ಅವರಿಗೆ ಚುನಾವಣಾ ಪ್ರಮಾಣಪತ್ರವನ್ನು ಹಸ್ತಾಂತರಿಸಿದ್ದಾರೆ.

5 ಬಾರಿ ಶಾಸಕರಾಗಿರುವ ನಿತಿನ್

ನಿತಿನ್‌ ಅವರು ಬಿಹಾರದಿಂದ ಐದು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಅವರನ್ನ ನಿನ್ನೆ ಅಂದರೆ ಸೋಮವಾರ ಬಿಜೆಪಿಯ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು . ಬಿಜೆಪಿ ಪ್ರಧಾನ ಕಚೇರಿಯಲ್ಲಿ ದಿನವಿಡೀ ನಡೆದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯ ನಂತರ ಈ ಘೋಷಣೆ ಮಾಡಲಾಗಿದೆ.

ಇನ್ನು ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ , ಬಿಜೆಪಿ ಮಾಜಿ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ನಿತಿನ್ ಗಡ್ಕರಿ ಅವರು ಕಾರ್ಯಕ್ರಮದಲ್ಲಿ  ನಬಿನ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಆಪರೇಷನ್ ಸಿಂಧೂರ್ ಮುಂದುವರೆದಿದೆ: ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ

Leave a Reply

Your email address will not be published. Required fields are marked *