BJP: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ, ಅಬಕಾರಿ ಹಗರಣ ಸಿಬಿಐ ತನಿಖೆಗೆ ಆಗ್ರಹ

BJP protest against congress over excise scam

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು 6,000 ಕೋಟಿ ರೂ.ಗಳ ಅಬಕಾರಿ ಹಗರಣದಲ್ಲಿ ಭಾಗಿಯಾಗಿದೆ ಎಂದು ಭಾರತೀಯ ಜನತಾ ಪಕ್ಷ (BJP) ಆರೋಪ ಮಾಡಿದ್ದು, ಈ ವಿಚಾರವಾಗಿ ವಿಧಾನಸಭೆಯೊಳಗೆ ಪ್ರತಿಭಟನೆ ನಡೆಸಲಾಗಿದೆ.

ಶಾಸಕರನ್ನ ಅಮಾನತು ಮಾಡುವಂತೆ ಬಿಜೆಪಿ ಒತ್ತಾಯ
ಕಳೆದ ವಾರ ವಿಧಾನಸಭೆಯ ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಾಡಿದ ಭಾಷಣದ ಬಗ್ಗೆ ಉಂಟಾದ ಗದ್ದಲದ ನಡುವೆ, ಕೆಲವು ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸುವಂತೆ ಬಿಜೆಪಿ ಒತ್ತಾಯ ಮಾಡಿದೆ.

ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜನತಾ ದಳ ವಿಧಾನಸಭಾ ಆವರಣದಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯ ಬಳಿ ಫಲಕಗಳನ್ನ ಹಿಡಿದುಕೊಂಡು ಪ್ರತಿಭಟನೆ ಮಾಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನ ಕೂಗಿದ್ದಾರೆ.

ಸಿಬಿಐ ತನಿಖೆಗೆ ವಿಜಯೇಂದ್ರ ಆಗ್ರಹ

ಇನ್ನು ಈ ಸಮಯದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಅಬಕಾರಿ ಸಚಿವರು ಮತ್ತು ಅವರ ಕುಟುಂಬ ಸದಸ್ಯರು ಭಾಗಿಯಾಗಿರುವ 6,000 ಕೋಟಿ ರೂ. ಹಗರಣ ಬಯಲಾಗಿದ್ದು, ಅದಕ್ಕೆ ಸಾಕ್ಷಿಗಳು ಸಹ ಸಿಕ್ಕಿದೆ. ಆದರೆ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಸದನದಲ್ಲಿ ಮಾತನಾಡಲು ತಯಾರಿಲ್ಲ. ಇದಕ್ಕೆ ಸಿಬಿಐ ತನಿಖೆಯೇ ಪರಿಹಾರ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜೀವ್‌ ಗೌಡ ಜೊತೆ ಮತ್ತೊಬ್ಬ ಆರೋಪಿ ಬಂಧನ, ಏನಿದು ಹೊಸ ವಿಚಾರ?

Leave a Reply

Your email address will not be published. Required fields are marked *