BJP: ರಾಜ್ಯ ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ಸಿಬಿಐ ತನಿಖೆ ಆಗಲಿ: ಆರ್‌ ಅಶೋಕ್

bjp r ashok demands cbi investigation for government corruption cases

ರಾಜ್ಯದಲ್ಲಿ ಶೇಕಡ 63ರಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಉಪ ಲೋಕಾಯುಕ್ತ, ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿರುವುದನ್ನ ಇಟ್ಟುಕೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿರೋಧ ಪಕ್ಷ ಬಿಜೆಪಿ (BJP) ಹರಿಹಾಯ್ದಿದೆ.

ಸಿಬಿಐ ತನಿಖೆಗೆ ಆಗ್ರಹ ಮಾಡಿದ ಬಿಜೆಪಿ

ಈ ವಿಚಾರವಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾತನಾಡಿದ್ದು, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಬೇಕು. ಈ ಆರೋಪ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. 

ಬೆಂಗಳೂರಿನಲ್ಲಿಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, ಮಹರ್ಷಿ ವಾಲ್ಮೀಕಿ ನಿಗಮ ಹಾಗೂ ಬೋವಿ ಅಭಿವೃದ್ಧಿ ನಿಗಮಗಳಲ್ಲಿ , ಭಾರಿ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿದ್ದು, ಮುಡಾ ಹಗರಣದಲ್ಲಿ 14 ನಿವೇಶನ ಲೂಟಿ ಮಾಡಿ ಮತ್ತೆ ಅದನ್ನು ವಾಪಸ್ ಮಾಡಿರುವುದರಿಂದ, ಈ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದಕ್ಕೆ ನಿದರ್ಶನಗಳಾಗಿವೆ. ಇದೀಗ ಉಪ ಲೋಕಾಯುಕ್ತರು ಬಹಿರಂಗವಾಗಿ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಈ ಕುರಿತು ಸಮಗ್ರ ತನಿಖೆ ಮಾಡಬೇಕು ಎಂದು ಆಗ್ರಹ ಮಾಡಿದ್ದಾರೆ.

ಸಿಎಂ ಕಾಸ್ಟ್ಲಿ ವಾಚ್‌ ಬಗ್ಗೆ ದಾಖಲೆ ರಿಲೀಸ್‌ ಮಾಡಲಿ

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸಹ ಈ ವಿಚಾರವಾಗಿ ಕಿಡಿಕಾರಿದ್ದು,  ಮುಖ್ಯಮಂತ್ರಿ ಸಿದ್ದರಾಮಯ್ಯ ದುಬಾರಿ ಕೈಗಡಿಯಾರ ಕಟ್ಟಿರುವ ವಿಚಾರದಲ್ಲಿ ಜನತೆಗೆ ಸತ್ಯಾಂಶ ತಿಳಿಸಬೇಕು. ಲಕ್ಷಾಂತರ ರೂಪಾಯಿ ಬೆಲೆಬಾಳುವ ಈ ಕೈಗಡಿಯಾರ ಖರೀದಿಸಿರುವ ದಾಖಲೆಗಳನ್ನು ಬಿಡುಗಡೆ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್‌ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌, ಸಿಎಂ ಪೋಸ್ಟ್‌ ಸೇಫ್‌?

Leave a Reply

Your email address will not be published. Required fields are marked *