ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ 6 ಕೋಟಿ ರೂಪಾಯಿ ಹಗರಣ ನಡೆದಿದ್ದು, ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಆಗ್ರಹ ಮಾಡಿದ್ದಾರೆ.
ಹೋರಾಟ ಮುಂದುವರೆಸಲಾಗುತ್ತೆ
ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡದಿದ್ದರೆ ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರತಿ ತಿಂಗಳು ಕೋಟಿ ವಸೂಲಿ ಮಾಡಿದ್ದಾರೆ
ಈ ಸಮಯದಲ್ಲಿ ಮಾತನಾಡಿದಪ್ರತಿಪಕ್ಷ ನಾಯಕ ಆರ್.ಅಶೋಕ, ಅಬಕಾರಿ ಸಚಿವರು ಪ್ರತಿ ತಿಂಗಳು ಕೋಟಿ ಕೋಟಿ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇನ್ನು ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು, ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಕಳೆದ ರಾತ್ರಿ ಅಹೋರಾತ್ರಿ ಧರಣಿ ನಡೆಸಿದ್ದಾರೆ.
ಇದನ್ನೂ ಓದಿ: ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ, ನಜೀರ್ ಅಹ್ಮದ್ ಅಮಾನತಿಗೆ ಬಿಜೆಪಿ ಒತ್ತಾಯ
