TOP NEWS

BY Vijayendra: ಹಿಜಾಬ್‌ಗೆ ಕಾಂಗ್ರೆಸ್ ಅಸ್ತು: “ಅಲ್ಪಸಂಖ್ಯಾತರ ಓಲೈಕೆಗಾಗಿ ಸರ್ಕಾರದಿಂದ ಷಡ್ಯಂತ್ರ” ಎಂದು ಗುಡುಗಿದ ವಿಜಯೇಂದ್ರ

by vijayendra angry about permission to hijab in school and college

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಹಸಿರು ನಿಶಾನೆ ತೋರಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಕಿಡಿಹೊತ್ತಿಸಿದ್ದಾರೆ. ಸರ್ಕಾರದ ಈ ನಡೆಯು ರಾಜ್ಯದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಎಂದು ಅವರು ನೇರ ವಾಗ್ದಾಳಿ ನಡೆಸಿದ್ದಾರೆ.

ಆಡಳಿತ ವೈಫಲ್ಯ ಮುಚ್ಚಿಡಲು ಷಡ್ಯಂತ್ರ: ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, “ರಾಜ್ಯ ಸರ್ಕಾರಕ್ಕೆ ಜನಹಿತಕ್ಕಿಂತ ರಾಜಕೀಯವೇ ಮುಖ್ಯವಾಗಿದೆ. ಆಡಳಿತದ ಮೇಲೆ ಹಿಡಿತ ಕಳೆದುಕೊಂಡಿರುವ ಇವರು, ಜನಸಾಮಾನ್ಯರ ಗಮನವನ್ನು ಬೇರೆಡೆ ಸೆಳೆಯಲು ಧರ್ಮಗಳ ನಡುವೆ ಕಲಹ ಸೃಷ್ಟಿಸುತ್ತಿದ್ದಾರೆ. ಕಾಂಗ್ರೆಸ್‌ನ ಇಂತಹ ಪ್ರಚೋದನಾಕಾರಿ ನಡೆಗಳಿಗೆ ಸಾರ್ವಜನಿಕರೇ ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ” ಎಂದು ಎಚ್ಚರಿಸಿದರು.

ಓಲೈಕೆಗಾಗಿ ನ್ಯಾಯಾಂಗದ ಕಡೆಗಣನೆ: ಹಿಜಾಬ್ ಪ್ರಕರಣ ನ್ಯಾಯಾಲಯದಲ್ಲಿರುವಾಗಲೇ ಸರ್ಕಾರ ಇಂತಹ ನಿರ್ಧಾರ ಕೈಗೊಂಡಿರುವುದು ಕೇವಲ ಒಂದು ವರ್ಗದ ಮತಗಳ ಓಲೈಕೆಗಾಗಿ ಎಂದು ಅವರು ಟೀಕಿಸಿದರು. ಅಲ್ಪಸಂಖ್ಯಾತ ಸಮುದಾಯವನ್ನು ಸಂತುಷ್ಟಗೊಳಿಸಲು ಕಾನೂನು ಮತ್ತು ಶಿಸ್ತನ್ನು ಬಲಿಕೊಡಲಾಗುತ್ತಿದೆ ಎಂದು ಅವರು ದೂರಿದರು.

ಹಿಂದೂಗಳ ಭಾವನೆಗೆ ಧಕ್ಕೆ: ಉಪಚುನಾವಣೆಯ ಫಲಿತಾಂಶದಿಂದ ಬೀಗುತ್ತಿರುವ ಕಾಂಗ್ರೆಸ್, ಸಮಾಜದಲ್ಲಿ ಒಡಕು ಮೂಡಿಸುವ ಕೆಲಸಕ್ಕೆ ಕೈ ಹಾಕಿದೆ. ಅಭಿವೃದ್ಧಿ ಮರೆತು ಕೇವಲ ತುಷ್ಟೀಕರಣದ ಅಜೆಂಡಾವನ್ನು ಜಾರಿಗೆ ತರುತ್ತಿರುವ ಸರ್ಕಾರ, ಹಿಂದೂಗಳ ಹಿತಾಸಕ್ತಿಯನ್ನು ಸತತವಾಗಿ ನಿರ್ಲಕ್ಷಿಸುತ್ತಿದೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ. ಪ್ರತಿ ಹೆಜ್ಜೆಯಲ್ಲೂ ಜನರನ್ನು ಪರಸ್ಪರ ಎತ್ತಿಕಟ್ಟುವ ಮೂಲಕ ರಾಜಕೀಯ ಲಾಭ ಪಡೆಯಲು ಸರ್ಕಾರ ಹೊಂಚು ಹಾಕುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ಹಿಜಾಬ್ ಬಂದರೆ ಕೇಸರಿ ಶಾಲೂ ಬಂದೇ ಬರುತ್ತೆ, ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ (Hijab) ಮೇಲಿದ್ದ ನಿರ್ಬಂಧವನ್ನು ತೆಗೆದುಹಾಕಲು ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಬಿಜೆಪಿ (BJP) ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ನಿರ್ಧಾರವು ಶಾಲಾ ಆವರಣದಲ್ಲಿ ಶಿಸ್ತು ಮತ್ತು ಸಮಾನತೆಯನ್ನು ಕದಡಲಿದೆ ಎಂದು ಆಪಾದಿಸಿರುವ ಬಿಜೆಪಿ ನಾಯಕರು, ಒಂದು ಸಮುದಾಯಕ್ಕೆ ವಿಶೇಷ ರಿಯಾಯಿತಿ ನೀಡಿದರೆ ಹಿಂದೂ ವಿದ್ಯಾರ್ಥಿಗಳೂ ಕೇಸರಿ ಶಾಲು ಧರಿಸಿ ಬರಲು ಅನುಮತಿ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಸಿ.ಟಿ. ರವಿ ಕಿಡಿ: “ಸಮವಸ್ತ್ರದ ಪರಿಕಲ್ಪನೆಗೆ ಧಕ್ಕೆ” 
ಈ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಕಿಡಿಕಾರಿದ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ‘ಮರಿ ತಾಲಿಬಾನ್’ ಸರ್ಕಾರ ಎಂದು ಟೀಕಿಸಿದರು. “ಸಮವಸ್ತ್ರ ಎಂದರೆ ಎಲ್ಲರೂ ಸಮಾನರು ಎಂದರ್ಥ. ಆದರೆ ಸರ್ಕಾರ ಹಿಜಾಬ್‌ಗೆ ಮಣೆ ಹಾಕುವ ಮೂಲಕ ಭೇದಭಾವ ಮಾಡುತ್ತಿದೆ. ಧಾರ್ಮಿಕ ಆಚರಣೆಗಳನ್ನು ಮನೆಗೆ ಸೀಮಿತಗೊಳಿಸಬೇಕೇ ಹೊರತು ಶಾಲೆಗಳಿಗಲ್ಲ. ಶಿಕ್ಷಣ ಕಾಯ್ದೆಯನ್ನು ಮೀರಿ ಇಂತಹ ನಿರ್ಧಾರ ಕೈಗೊಳ್ಳುವುದು ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತದೆ” ಎಂದು ಅವರು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ಹರಿಹರ ಠಾಣೆಯಲ್ಲಿ ವಚನಾನಂದ ಶ್ರೀಗಳ ವಿಚಾರಣೆ: ಕಾನೂನು ಗೌರವಿಸುತ್ತೇವೆ ಎಂದ ಸ್ವಾಮೀಜಿ.

Leave a Reply

Your email address will not be published. Required fields are marked *