BY Vijayendra: ಇಂದು ಬಿಜೆಪಿ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆ

BY Vijayendra checks meeting preparations

ಬೆಂಗಳೂರು: ಬಿಜೆಪಿಯ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆ ಬೆಂಗಳೂರಿನಲ್ಲಿ ಇಂದು ನಡೆಯಲಿದ್ದು,  ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅರಮನೆ ಮೈದಾನಕ್ಕೆ ಭೇಟಿ ನೀಡಿ ಕಾರ್ಯಕಾರಿಣಿ ಸಭೆಯ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ್ದಾರೆ.

ಯಾರೆಲ್ಲಾ ಭಾಗವಹಿಸಲಿದ್ದಾರೆ?

ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ, ಪ್ರೀತಂಗೌಡ ಮತ್ತಿತರರು ಉಪಸ್ಥಿತರಿದ್ದರು.  ಬಳಿಕ ವಿಜಯೇಂದ್ರ,  ರಾಜ್ಯ ಕಾರ್ಯಕಾರಿಣಿಯನ್ನು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಉದ್ಘಾಟನೆ ಮಾಡಲಿದ್ದಾರೆ. ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಸೇರಿದಂತೆ ಹಿರಿಯ ನಾಯಕರು ಭಾಗವಹಿಸಲಿದ್ದು, ಮುಂದಿನ ದಿನಗಳಲ್ಲಿನ ಚುನಾವಣೆಗಳ ತಯಾರಿ ಹಾಗೂ ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ನಡೆಯಲಿದೆ.

ಇದನ್ನೂ ಓದಿ: ರಾಜ್ಯ ಚುನಾವಣಾ ಆಯುಕ್ತರನ್ನ ಭೇಟಿ ಮಾಡಿದ ಡಿಕೆ ಶಿವಕುಮಾರ್

Leave a Reply

Your email address will not be published. Required fields are marked *