ಬೆಳಗಾವಿ: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸ್ಥಗಿತಗೊಂಡಿದ್ದು, ಸರ್ಕಾರ ಹಿಂದುಳಿದ ಹಾಗೂ ಪರಿಶಿಷ್ಟ ಸಮುದಾಯಗಳ ಕಲ್ಯಾಣದ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ.
ಸರ್ಕಾರ ಜನರಿಗೆ ವಂಚನೆ ಮಾಡಿದೆ
ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಹಿಂದುಳಿದ ಸಮುದಾಯಗಳ ೧ ಲಕ್ಷದ ೧೪ ಸಾವಿರ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ಸೌಕರ್ಯ ಒದಗಿಸದೆ ವಂಚಿಸಿದೆ ಎಂದು ದೂರಿದ್ದಾರೆ. ರಾಜ್ಯದಲ್ಲಿ 2 ಲಕ್ಷ 85 ಸಾವಿರ ಹುದ್ದೆಗಳು ಖಾಲಿ ಉಳಿದಿವೆ. ಮೀಸಲಾತಿ ಪ್ರಮಾಣವನ್ನು 56ಕ್ಕೆ ಏರಿಸಿರುವ ಬಗ್ಗೆ ನ್ಯಾಯಲಯದಲ್ಲಿ ಸರಿಯಾಗಿ ವಾದ ಮಂಡನೆ ಮಾಡದೆ ಕಾಲಹರಣದಲ್ಲಿ ತೊಡಗಿದೆ ಎಂದು ಹೇಳಿದ್ದಾರೆ.
ಸರ್ಕಾರ 45 ಕೋಟಿ ರೂಪಾಯಿ ಬಾಕಿ ಉಳಿಸಿದೆ
ಬಡವರಿಗೆ ಮನೆಗಳ ಹಂಚಿಕೆ, ಗಂಗಾಕಲ್ಯಾಣ ಯೋಜನೆ ಅನುಷ್ಠಾನ ಆಗುತ್ತಿಲ್ಲ. ಮರಣ ಹೊಂದಿದ ಕುರಿಮೇಕೆಗಳ ಪರಿಹಾರ ಒದಗಿಸಬೇಕಾದ ಅನುಗ್ರಹ ಯೋಜನೆಯ 4ನೇ ಕಂತಿನ ಹಣ ಬಿಡುಗಡೆ ಮಾಡದೆ 45 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ದೆಹಲಿಯಲ್ಲಿ ನಾಯಕರ ಜೊತೆ ಡಿಕೆಶಿ ಸಭೆ, ಕಾಲವೇ ಉತ್ತರ ನೀಡಲಿದೆ ಎಂದ ಡಿಸಿಎಂ
