ಬೆಂಗಳೂರು: ಒಳಮೀಸಲಾತಿಯನ್ನು ಪರಿಗಣಿಸಿ ಸರ್ಕಾರ ಉದ್ಯೋಗ ಸೃಷ್ಟಿ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.
ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ನ್ಯಾಯಾಲಯದ ಕುಂಟುನೆಪ ಹೇಳಬಾರದು. ಉದ್ಯೋಗ ಸೃಷ್ಟಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು,” ಎಂದು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರ ಸಂಪೂರ್ಣ ವಿಫಲ
ಸರ್ಕಾರ ಇದುವರೆಗೆ ಅತಿಥಿ ಉಪನ್ಯಾಸಕರ ಯಾವುದೇ ಭರವಸೆ ಈಡೇರಿಸಿಲ್ಲ. ಶೀಘ್ರವೇ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹೋರಾಟ ಆರಂಭಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಆಡಳಿತ ನಡೆಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ದೂರಿದ್ದಾರೆ.
