TOP NEWS
Women Will Definitely Get Space in Cabinet DK Shivakumar Assures Representation

DK Shivakumar: ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿ ಕೆ ಶಿವಕುಮಾರ್ ಭರವಸೆ

ಬೆಂಗಳೂರು: “ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು. ಕರ್ನಾಟಕದಲ್ಲಿ ನಾವು ಮಹಿಳೆಯರಿಗೆ ಹೆಚ್ಚು ಸ್ಥಾನ ನೀಡಿದ್ದೆವು ವಿಧಾನಸೌಧ ಆವರಣದಲ್ಲಿ ಎಸ್ ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ಅವರು ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಚರ್ಚೆ ಮಾಡಿದ್ದಕ್ಕೆ ಕಿರಣ್…

Read More
Big Shake Up in Karnataka Congress CM DK Shivakumar Issues Firm Order for Board Presidents to Resign

DK Shivakumar: ಆಗಸ್ಟ್ 14 ರಂದು ನೂತನ ಉಪಸಭಾಪತಿ, ಸಭಾಪತಿ ಆಯ್ಕೆ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜಿನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು. ತಮ್ಮ ಹೃದಯ ವೈಶಾಲ್ಯತೆ ತೋರಿದ್ದಾರೆ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು, “ಪ್ರಸಕ್ತ ರಾಜಕೀಯ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ನೀಡಿದ್ದಾರೆ. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ….

Read More
Shocking Raids on Bengaluru Five Star Hotels Rotten Veggies Potted Sparking Health Concerns

Bengaluru: ಫೈವ್ ಸ್ಟಾರ್ ಹೋಟೆಲ್‌ಗಳ ಕಿಚನ್‌ಗೆ ಅಧಿಕಾರಿಗಳ ಶಾಕ್: ದುಬಾರಿ ಹೋಟೆಲ್‌ಗಳಲ್ಲೂ ಕಳಪೆ ಆಹಾರ, ಗ್ರಾಹಕರಲ್ಲಿ ಆತಂಕ

ಬೆಂಗಳೂರು: ಸಿಲಿಕಾನ್ ಸಿಟಿಯ (Bengaluru) ಪ್ರತಿಷ್ಠಿತ ಪಂಚತಾರಾ (ಫೈವ್ ಸ್ಟಾರ್) ಹೋಟೆಲ್‌ಗಳಿಗೆ ಆರೋಗ್ಯ ಸುರಕ್ಷತಾ ವಿಭಾಗದ ಅಧಿಕಾರಿಗಳು ಶುಕ್ರವಾರ ದೊಡ್ಡ ಶಾಕ್ ನೀಡಿದ್ದಾರೆ. ದುಬಾರಿ ಹಣ ಪಡೆದು ಗ್ರಾಹಕರಿಗೆ ನೀಡಲಾಗುವ ಆಹಾರದ ಗುಣಮಟ್ಟ, ಅಡುಗೆ ಕೋಣೆಯ ಸ್ವಚ್ಛತೆ ಹಾಗೂ ಆಹಾರ ಸಂಸ್ಕರಣಾ ವಿಧಾನಗಳನ್ನು ಪರಿಶೀಲಿಸಲು 30ಕ್ಕೂ ಹೆಚ್ಚು ಅಧಿಕಾರಿಗಳ ಬೃಹತ್ ತಂಡ ನಗರದ ವಿವಿಧ ಹೋಟೆಲ್‌ಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದೆ. ಈ ತಪಾಸಣೆಯ ವೇಳೆ ಕೆಲವು ಪ್ರತಿಷ್ಠಿತ ಹೋಟೆಲ್‌ಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳು ಹಾಗೂ…

Read More
Big Shock for BMRDA Karnataka High Court Halts Ambitious Bidadi township Project

Bidadi Township: ಭೂಸ್ವಾಧೀನ ವಿರುದ್ಧ ಹೋರಾಡುತ್ತಿದ್ದ ರೈತರಿಗೆ ನ್ಯಾಯಿಕ ಜಯ: ಬಿಡದಿ ಟೌನ್‌ಶಿಪ್ ಕಾಮಗಾರಿಗೆ ಬ್ರೇಕ್ ಹಾಕಿದ ಕೋರ್ಟ್!

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (BMRDA) ಜಂಟಿಯಾಗಿ ಸಾಕಾರಗೊಳಿಸಲು ಉದ್ದೇಶಿಸಿದ್ದ ಹೈಟೆಕ್ ‘ಬಿಡದಿ ಸ್ಮಾರ್ಟ್ ಸಿಟಿ’ (Bidadi Township) ಯೋಜನೆಗೆ ಕರ್ನಾಟಕ ಉಚ್ಚ ನ್ಯಾಯಾಲಯ (ಹೈಕೋರ್ಟ್) ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಾಲಯದ ಈ ಆದೇಶದಿಂದಾಗಿ ಸರ್ಕಾರದ ಅತ್ಯಂತ ಪ್ರತಿಷ್ಠಿತ ಯೋಜನೆಯೊಂದಕ್ಕೆ ಆರಂಭದಲ್ಲೇ ದೊಡ್ಡ ಹಿನ್ನಡೆಯಾಗಿದೆ. ಕೋರ್ಟ್‌ನಿಂದ ಕಾಮಗಾರಿಗೆ ಬ್ರೇಕ್ ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಪರಿಸರ ನಿಯಮಗಳ ಉಲ್ಲಂಘನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ಸುದೀರ್ಘ…

Read More
Cauvery Flare up Tamil Nadu Knocks Supreme Court Doors Claims Karnataka Refusing Water Despite Full Dams

Cauvery: ನಮಗೆ ನೀರು ಬೇಕು! ತಮಿಳುನಾಡು ಸಿಎಂ ವಿಜಯ್ ಹೊಸ ತಗಾದೆ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ದೇಶದ ಅತ್ಯುನ್ನತ ನ್ಯಾಯಾಲಯದ ಮೆಟ್ಟಿಲೇರಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶಗಳ ಪ್ರಕಾರ ಕರ್ನಾಟಕ ತಮಗೆ ನೀಡಬೇಕಾದ ನೀರಿನ ಪಾಲನ್ನು ಬಿಡುತ್ತಿಲ್ಲ ಎಂದು ಆರೋಪಿಸಿ ತಮಿಳುನಾಡು (Cauvery) ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ನದಿ ಪ್ರಾಧಿಕಾರಗಳು ಪದೇ ಪದೇ ಸೂಚನೆ ನೀಡಿದ್ದರೂ ಕರ್ನಾಟಕ ಅಗತ್ಯ ಪ್ರಮಾಣದ ನೀರನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿರುವ ತಮಿಳುನಾಡು…

Read More
Can not Change Chairman Just by Numbers Basavaraj Horatti Challenges Congress Megaphone Moves

Horatti: ಹೊರಟ್ಟಿ ಕುರ್ಚಿ ಅಷ್ಟು ಸುಲಭವಾಗಿ ಸಿಗಲ್ಲ! ಮೇಲ್ಮನೆ ಗಾದಿ ಬದಲಾವಣೆಗೆ ಕಾಂಗ್ರೆಸ್‌ಗೆ ಕಾನೂನು ಸಂಕಷ್ಟ?

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ಕಾಂಗ್ರೆಸ್ ಮುಖಂಡರಾದ ಸಲೀಂ ಅಹಮದ್ ಹಾಗೂ ಉಪ ಸಭಾಪತಿ ಸ್ಥಾನಕ್ಕೆ ಹಿರಿಯ ನಾಯಕಿ ಉಮಾಶ್ರೀ ಅವರ ಹೆಸರುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಪ್ರಸ್ತುತ ಸಭಾಪತಿಯಾಗಿರುವ ಬಸವರಾಜ್ ಹೊರಟ್ಟಿ Horatti) ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸದೀಯ ನಿಯಮಾವಳಿಗಳು ಹಾಗೂ ಇತಿಹಾಸವನ್ನು ಉಲ್ಲೇಖಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್‌ನ ಉತ್ಸಾಹಕ್ಕೆ ಕಾನೂನಿನ ಬ್ರೇಕ್ ಹಾಕಿದ್ದಾರೆ. ನಾನಿನ್ನೂ ಅಧಿಕಾರದಲ್ಲೇ ಇದ್ದೇನೆ: ಹೊರಟ್ಟಿ ಖಡಕ್ ಮಾತು ತಮ್ಮನ್ನು ಸಭಾಪತಿ ಹುದ್ದೆಯಿಂದ ಕೆಳಗಿಳಿಸಲಾಗುತ್ತದೆ ಎಂಬ ವದಂತಿಗಳಿಗೆ…

Read More
Big Reward for Loyalty Late CMs Son Dr Ajay Singh Ends Long Wait Joins Karnataka Cabinet

Ajay Singh: ಧರ್ಮಸಿಂಗ್ ನಿವಾಸದಲ್ಲಿ ಭಾವುಕ ಕ್ಷಣ: ಮಗನಿಗೆ ಸಚಿವ ಸ್ಥಾನ ಸಿಗುತ್ತಿದ್ದಂತೆ ಕಣ್ಣೀರಿಟ್ಟ ತಾಯಿ ಪ್ರಭಾವತಿ!

ಬೆಂಗಳೂರು: ಕರ್ನಾಟಕದ ಹಿರಿಯ ರಾಜಕಾರಣಿ, ದಿವಂಗತ ಎನ್. ಧರ್ಮಸಿಂಗ್ ಅವರ ಬೆಂಗಳೂರಿನ ನಿವಾಸದಲ್ಲಿ ಇಂದು ಹಬ್ಬದ ವಾತಾವರಣದ ಜೊತೆಗೆ ಭಾವುಕ ಕ್ಷಣಗಳು ಎದುರಾಗಿವೆ. ಜೇವರ್ಗಿ ಕ್ಷೇತ್ರದ ಶಾಸಕರಾಗಿರುವ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ (Ajay Singh) ಅವರಿಗೆ ಕೊನೆಗೂ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿದ್ದು, ಈ ಸಂತಸದ ಸುದ್ದಿ ಕೇಳಿ ಅವರ ತಾಯಿ ಪ್ರಭಾವತಿ ಧರ್ಮಸಿಂಗ್ ಕಣ್ಣೀರು ಹಾಕಿದ್ದಾರೆ. ಮಗನನ್ನ ತಬ್ಬಿಕೊಂಡ ತಾಯಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ ಅಜಯ್ ಸಿಂಗ್…

Read More