G Parameshwar: ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ, ಗೃಹ ಸಚಿವರು ಹೇಳಿದ್ದೇನು?
ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯೊಬ್ಬರ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಯವರು ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ. ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಬೆಂಗಳೂರಿನ ಗೃಹ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸಿ ಸಿಐಡಿ ಸರ್ಕಾರಕ್ಕೆ ವರದಿ ನೀಡಿದ ನಂತರ ತಪ್ಪಿತಸ್ಥರು ಹಾಗೂ ಘಟನೆಯಲ್ಲಿ ಯಾರ ನಿರ್ಲಕ್ಷ್ಯವಿದೆ ಎಂಬುದನ್ನು ಪರಿಗಣಿಸಿ ಮುಂದಿನ ಕ್ರಮ…
