CHAMARAJNAGAR: ದಿವ್ಯಾಂಗರು ಕೀಳರಿಮೆ ಬಿಟ್ಟು ಸಾಮಾನ್ಯರಂತೆ ಜೀವನ ನಡೆಸಬೇಕು

chamarajanagar sports program organized

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಚಾಮರಾಜನಗರದಲ್ಲಿಂದು  (Chamarajnagar) ಜಿಲ್ಲಾ ಮಟ್ಟದ ವಿಕಲ ಚೇತನರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು.

ಯಾರೆಲ್ಲಾ ಭಾಗಿ ಆಗಿದ್ದರು?

ಈ ಕಾರ್ಯಕ್ರಮದಲ್ಲಿ, ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಶೃತಿ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕ ಸುರೇಶ್‌,  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ  ಸಹಾಯಕ ನಿದೇರ್ಶಕ ಸುರೇಶ್‌, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಮಂಜುನಾಥ್‌ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಕೀಳರಿಮೆ ಬಿಟ್ಟು ಜೀವನ ನಡೆಸಬೇಕು

ಈ ಕಾರ್ಯಕ್ರಮದಲ್ಲಿ ಮಾತನಾಡಿದ, ಟಿ. ಜವರೇಗೌಡ, ದಿವ್ಯಾಂಗರು ತಮ್ಮಲ್ಲಿರುವ  ಕೀಳರಿಮೆ ಬಿಟ್ಟು ಸಾಮಾನ್ಯರಂತೆ ಜೀವನ ನಡೆಸಬೇಕು. ಸಕಾರಾತ್ಮಕ ಆಲೋಚನೆ, ಚಿಂತನೆಗಳ ಮೂಲಕ ಸಮಾಜದಲ್ಲಿ ಇತರರಿಗೆ ಮಾದರಿಯಾಗಬೇಕು, ಕ್ರೀಡೆ, ಕಲೆ, ಸಾಹಿತ್ಯ, ವಿಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾಧನೆಗೆ ವಿಫುಲ ಅವಕಾಶವಿದ್ದು, ಅದನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

Leave a Reply

Your email address will not be published. Required fields are marked *