ಚಾಮರಾಜನಗರ: ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಚಾಮರಾಜನಗರದಲ್ಲಿ (Chamarajnagar) ಆರಂಭಿಸಿರುವ ನೂತನ ‘ಅಕ್ಕ ಪಡೆಗೆ’ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಚಾಲನೆ ನೀಡಿದ್ದಾರೆ.
ಮಹಿಳೆಯರ ಸುರಕ್ಷತೆಗೆ ಅಕ್ಕ ಪಡೆ
ಬಳಿಕ ಕೆ. ವೆಂಕಟೇಶ್, ಸಮಾಜದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಕ್ಕ ಪಡೆ ಆರಂಭಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಆರಂಭಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಶಾಲಾ-ಕಾಲೇಜುಗಳು, ವಸತಿ ನಿಲಯಗಳು, ಜಾತ್ರೆಗಳು ಸೇರಿದಂತೆ ಜನಸಂದಣಿ ಇರುವ ಕಡೆ ಮಹಿಳೆಯರ ಸುರಕ್ಷತೆಗೆ ಒತ್ತು ನೀಡಲಾಗುತ್ತಿದೆ ಎಂದರು.
ಯಾರೆಲ್ಲಾ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು?
ಈ ವೇಳೆ ಶಾಸಕ ಸಿ. ಪುಟ್ಟರಂಗ ಶೆಟ್ಟಿ, ಕಾಡಾ ಅಧ್ಯಕ್ಷ ಮರಿಸ್ವಾಮಿ, ಚೂಡಾ ಅಧ್ಯಕ್ಷ ಮೊಹಮ್ಮದ್ ಅಸ್ಗರ್ ಮುನ್ನ, ಜಿಲ್ಲಾಧಿಕಾರಿ ಶ್ರೀರೂಪಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊನಾರೋತ್, ಜಿಲ್ಲಾ ಪೊಲೀಸ್ ಅಧೀಕ್ಷಕ ಮುತ್ತುರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ: ಸೋಮನಾಥ ದೇವಾಲಯ ದಾಳಿಗೆ ಸಾವಿರ ವರ್ಷ, ಹಿಂದೂ ಧರ್ಮ ಉಳಿಸುವಂತೆ ಕರೆ
