CM Siddaramaiah: ರಾಜ್ಯ ಬಜೆಟ್‌ ಹಿನ್ನೆಲೆ, ಸಿಎಂ ಸಿದ್ದರಾಮಯ್ಯ ಸಭೆ

CM Siddaramaiah meeting with ministers and officers regarding budget

ಬೆಂಗಳೂರು: 2026-27ನೇ ಸಾಲಿನ ರಾಜ್ಯ  ಮುಂಗಡಪತ್ರ  ಮಂಡನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬೆಂಗಳೂರಿನಲ್ಲಿ  ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಮಾಹಿತಿ ಪಡೆದರು. 

ಅಧಿಕಾರಿಗಳೊಂದಿಗೆ ಸಭೆ

ಇಂಧನ,  ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ,  ಕಂದಾಯ ಇಲಾಖೆಯ ಸಚಿವರು, ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಇಲಾಖೆಯ ಅನುದಾನದ ಬೇಡಿಕೆ ,ಮುಂದಿನ ಆರ್ಥಿಕ ವರ್ಷದಲ್ಲಿ  ಇಲಾಖಾ ವತಿಯಿಂದ ಜಾರಿಗೊಳಿಸಲು ಉದ್ದೇಶಿಸಿರುವ  ನೂತನ ಕಾರ್ಯಕ್ರಮಗಳ ಕುರಿತು ವಿವರ ಪಡೆದರು.

ಯಾರೆಲ್ಲಾ ಸಭೆಯಲ್ಲಿ ಇದ್ದರು?

 ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್. ಕೃಷ್ಣ ಬೈರೇಗೌಡ. ಡಿ. ಸುಧಾಕರ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ  ಬಸವರಾಜ ರಾಯರೆಡ್ಡಿ, ರಾಜ್ಯ ಯೋಜನಾ ಆಯೋಗದ  ಉಪಾಧ್ಯಕ್ಷ ಬಿ.ಆರ್. ಪಾಟೀಲ್, ಮುಖ್ಯಮಂತ್ರಿ  ರಾಜಕೀಯ ಕಾರ್ಯದರ್ಶಿ  ನಸೀರ್ ಅಹ್ಮದ್, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆ ಮುಖ್ಯಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. 

ಇದನ್ನೂ ಓದಿ: ಬಜೆಟ್ ಅಧಿವೇಶನ ಮುಗಿದ ಬಳಿಕ ಕ್ಯಾಬಿನೆಟ್ ವಿಸ್ತರಣೆ? ಸಲೀಂ ಅಹಮ್ಮದ್ ಹೇಳಿದ್ದೇನು?

Leave a Reply

Your email address will not be published. Required fields are marked *