ಮೈಸೂರು: ರಾಜಕೀಯವಾಗಿ ಸೋಲು ಮತ್ತು ಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.
1978ರಿಂದ ರಾಜಕೀಯ ಆರಂಭ
ಮೈಸೂರು ಸಮೀಪದ ವರುಣಾ ವಿಧಾನಸಭಾ ಕ್ಷೇತ್ರದ ಬೀರೇಶ್ವರಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, 1978ರಿಂದ ತಮ್ಮ ರಾಜಕೀಯ ಜೀವನ ಆರಂಭವಾಗಿದ್ದು, ಅಂದಿನಿಂದ ಇಲ್ಲಿಯವರೆಗೆ ಜನರ ಅಪಾರ ಬೆಂಬಲ ದೊರೆತಿದೆ ಎಂದು ಸ್ಮರಿಸಿದರು.
ಜನರ ಬೆಂಬಲದಿಂದ ಈ ಮಟ್ಟಕ್ಕೆ ಬೆಳೆದಿದ್ದೇನೆ
ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದ ಜನರ ನಿರಂತರ ಬೆಂಬಲದಿಂದಾಗಿ ತಮಗೆ ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಹಣಕಾಸು ಸಚಿವನಾಗಿ ಕೆಲಸ ಮಾಡುವ ದೊಡ್ಡ ಅವಕಾಶ ಸಿಕ್ಕಿದೆ. ತಮ್ಮ ಈ ಸುದೀರ್ಘ ರಾಜಕೀಯ ಅವಧಿಯಲ್ಲಿ ಒಟ್ಟು 17 ಬಾರಿ ರಾಜ್ಯ ಬಜೆಟ್ ಮಂಡಿಸಿರುವುದು ಜೀವನದ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು.
ಇದನ್ನೂ ಓದಿ: ಅನಧಿಕೃತ ಸಿಲಿಂಡರ್ ಮಾರಾಟದ ವಿರುದ್ಧ ಕ್ರಮ: ಕೆಎಚ್ ಮುನಿಯಪ್ಪ
