DK Shivakumar: ಸತೀಶ್‌ ಜಾರಕಿಹೊಳಿ ಅವರನ್ನ ಭೇಟಿ ಆಗಿದ್ದು ಸತ್ಯ ಎಂದ ಡಿಸಿಎಂ ಡಿಕೆಶಿ

dcm dk shivakumar accepts meeting satish jarkiholi

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸ್ಪಷ್ಟನೆ ನೀಡಿದ್ದಾರೆ.

ಪ್ರತಿಪಕ್ಷದ ಆರೋಪಗಳಿಗೆ ಉತ್ತರ ಕೊಡುತ್ತೇವೆ
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ಕುರಿತು ಉಪಲೋಕಾಯುಕ್ತರ ವರದಿಯನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ ಅಧಿವೇಶನದಲ್ಲಿ ಪ್ರಸ್ತಾಪಿಸಲಿ ಎಂದು ಹೇಳಿದ್ದಾರೆ.  ಅಲ್ಲದೇ, ಅಧಿವೇಶನದಲ್ಲಿ ಬಿಜೆಪಿ ನಾಯಕರ ಎಲ್ಲಾ ಆರೋಪಗಳಿಗೆ ಉತ್ತರ ನೀಡುವುದಾಗಿ ತಿರುಗೇಟು ಕೊಟ್ಟಿದ್ದಾರೆ. ಇನ್ನು ರಾಜ್ಯಕ್ಕೆ ಸಂಬಂಧಪಟ್ಟ ಅನೇಕ ವಿಚಾರವಾಗಿ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ ಚರ್ಚಿಸಿ, ಶೀಘ್ರವೇ ದೆಹಲಿಯಲ್ಲಿ ಸಂಸದರ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ಸಿಬಿಐ ತನಿಖೆ ಆಗಲಿ: ಆರ್‌ ಅಶೋಕ್

Leave a Reply

Your email address will not be published. Required fields are marked *