ಬೆಂಗಳೂರು: ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿಯೇ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ (DGP Ramachandra Rao) ರಾಸಲೀಲೆ ವಿಡಿಯೋ (Video) ಈಗ ವೈರಲ್ ಆಗಿದ್ದು, ರಾಜ್ಯದಲ್ಲಿ ಸಂಚಲನ ಮೂಡಿಸಿದೆ.
ಏನಿದೆ ವಿಡಿಯೋದಲ್ಲಿ?
ಸದ್ಯ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಅಧಿಕಾರಿ ರಾಮಚಂದ್ರ ರಾವ್ ಅವರು ತನ್ನ ಕಚೇರಿಯ ಒಳಗಡೆಯೇ ಮಹಿಳೆಯೊಬ್ಬಳನ್ನ ತಬ್ಬಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಎಲ್ಲೆಡೆ ಚರ್ಚೆಯನ್ನ ಹುಟ್ಟುಹಾಕಿದೆ.
ಸದ್ಯದಲ್ಲಿ ನಿವೃತ್ತಿ ಆಗಲಿದ್ದಾರೆ ಅಧಿಕಾರಿ
ಮುಖ್ಯವಾಗಿ 4-5 ತಿಂಗಳಲ್ಲಿ ರಾಮಚಂದ್ರ ರಾವ್ ಪೊಲೀಸ್ ಇಲಾಖೆಯಿಂದ ನಿವೃತ್ತರಾಗಲಿದ್ದಾರೆ. ಆದರೆ, ನಿವೃತ್ತರಾಗುತ್ತಿರುವ ಈ ಸಮಯದಲ್ಲೇ ಅವರು ರಹಸ್ಯ ಕ್ಯಾಮೆರಾದಲ್ಲಿ ಸಿಕ್ಕಿ ಹಾಕಿಕೊಂಡಿದ್ದು, ಪೊಲೀಸ್ ಇಲಾಖೆಯ ಮಾರ್ಯಾದೆ ಹರಾಜಾಗಿದೆ ಎಂದು ಜನರು ಕಿಡಿಕಾರುತ್ತಿದ್ದಾರೆ.
ರಾಮಚಂದ್ರರಾವ್ ಅವರ ಈ ರಾಸಲೀಲೆ ವಿಡಿಯೋ ಬಿಡುಗಡೆ ಆಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಸಹ ವರದಿಯನ್ನ ಕೇಳಿದ್ದಾರೆ ಎನ್ನಲಾಗಿದೆ.
ಮತ್ತೊಂದು ಬಹಳ ಮುಖ್ಯವಾಗಿ ವಿಚಾರ ಎಂದರೆ ಈ ಹಿಂದೆ ಚಿನ್ನ ಕಳ್ಳ ಸಾಗಾಣಿಕೆಯ ಪ್ರಕರಣದಲ್ಲಿ ಇವರ ಪುತ್ರಿ ರನ್ಯ ರಾವ್‌ಗೆ ಶಿಷ್ಟಾಚಾರ ಉಲ್ಲಂಘಿಸಿದ್ದರು, ಸದ್ಯ ಅವರೂ ಸಹ ಜೈಲಿನಲ್ಲಿದ್ದಾರೆ.
ಇದನ್ನೂ ಓದಿ: ಪಿಯುಸಿ ಪ್ರಶ್ನೆಪತ್ರಿಕೆ ಲೀಕ್ ಪ್ರಕರಣ, ಕಠಿಣ ನಿಯಮ ಜಾರಿ ಮಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆ
