Dinesh Gundu Rao: ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದಾರೆ: ದಿನೇಶ್ ಗುಂಡೂರಾವ್

Dinesh gundu rao talks about governor speech

ದಕ್ಷಿಣ ಕನ್ನಡ: ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದು, ಬಿಜೆಪಿಯ ಮಾರ್ಗದರ್ಶನದಂತೆ ನಡೆಯುತ್ತಿದ್ದಾರೆ ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಆರೋಪ ಮಾಡಿದ್ದಾರೆ.

ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ

ಮಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೇತರ ಆಡಳಿತ ಇರುವ ಕಡೆಗಳಲ್ಲಿ ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ತೊಂದರೆ ಕೊಡುವ ಕೆಲಸ ಮಾಡುತ್ತಿದೆ. ಇದು ದೇಶದ ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನದ ಆಶಯಗಳನ್ನು ಧಿಕ್ಕರಿಸುವ ನಡವಳಿಕೆಯಾಗಿದೆ. ಇಂತಹ ಬೆಳವಣಿಗೆಗಳು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು ಹೇಳಿದ್ದಾರೆ.

ರಾಜ್ಯಪಾಲರ ಭಾಷಣ ವೈಯಕ್ತಿಕವಲ್ಲ

ರಾಜ್ಯಪಾಲರು ನಮ್ಮ ಸರ್ಕಾರದ ಪ್ರತಿನಿಧಿ ಅವರ ಭಾಷಣ ಎಂದರೆ ಅದು ಸರ್ಕಾರದ ಭಾಷಣವೇ ಹೊರತು ಅವರ ವೈಯಕ್ತಿಕ ಅಭಿಪ್ರಾಯ ಅಲ್ಲ. ಸರ್ಕಾರದ ಉದ್ದೇಶ ಮತ್ತು ಸಾಧನೆಗಳನ್ನು ಹೇಳುವುದು ಅವರ ಜವಾಬ್ದಾರಿ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಇದನ್ನೂ ಓದಿ: ರಾಜ್ಯ ಸರ್ಕಾರ ರೈತರಿಗೆ ವಂಚನೆ ಮಾಡುತ್ತಿದೆ: ಎಚ್‌ಡಿ ಕುಮಾರಸ್ವಾಮಿ

Leave a Reply

Your email address will not be published. Required fields are marked *