TOP NEWS

Dinesh Gundu Rao: 890 ವಿಧದ ಔಷಧಿಗಳ ಖರೀದಿಗೆ 880 ಕೋಟಿ ವೆಚ್ಚ: ದಿನೇಶ್‌ ಗುಂಡೂರಾವ್‌

Dinesh Gundu Rao talks about medicine supply

ಬೆಂಗಳೂರು : ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆ ಹಾಗೂ ಇತರ ಸರ್ಕಾರಿ ಸಂಸ್ಥೆಗಳಿಗೆ ಅಗತ್ಯವಿರುವ 890 ವಿಧಗಳ ಔಷಧಿಗಳನ್ನು ಸುಮಾರು 880 ಕೋಟಿ ರೂಪಾಯಿ ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ.

ಪಾರದರ್ಶಕ ಟೆಂಡರ್

 ವಿಧಾನ ಪರಿಷತ್ತಿನಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಡಾ. ಧನಂಜಯ ಸರ್ಜಿ ಹಾಗೂ ಪ್ರತಾಪಸಿಂಹ ನಾಯಕ್ ಕೆ. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಔಷಧಗಳನ್ನು ಖರೀದಿಸಲು ಕೆಎಸ್‌ಎಂಎಸ್‌ಸಿಎಲ್ (KSMSCL) ಸಂಸ್ಥೆಗೆ ಅನುಮೋದನೆ ನೀಡಲಾಗಿದೆ. ಔಷಧ ಖರೀದಿಯನ್ನು ಪಾರದರ್ಶಕವಾಗಿ ಟೆಂಡರ್ ಕರೆದು ಮಾಡಲಾಗುತ್ತಿದೆ. ಹೆಚ್ಚು ಬಿಡ್‌ದಾರರು ಭಾಗವಹಿಸಲು ಅವಕಾಶವಾಗುವಂತೆ ಟೆಂಡರ್ ಷರತ್ತುಗಳನ್ನು ವಿಧಿಸಲಾಗಿದೆ ಎಂದರು.

ಈ ತಿಂಗಳು ಪೂರೈಕೆ ಆಗಲಿದೆ

 ಔಷಧ ಸರಬರಾಜು ಮಾಡುವ ಮುನ್ನವೇ ಗುಣಮಟ್ಟದ ಪರೀಕ್ಷೆ ಮಾಡಲಾಗುವುದು. ಕೊರತೆ ಇರುವ ಔಷಧಗಳನ್ನು ತಾತ್ಕಾಲಿಕವಾಗಿ ಖರೀದಿಸಲು ಕ್ರಮ ಕೈಗೊಳ್ಳಲಾಗಿದೆ. ವಾರ್ಷಿಕ ಔಷಧಿ ಖರೀದಿ ಬದಲು 3 ರಿಂದ 4 ತಿಂಗಳಿಗೊಮ್ಮೆ ಅಗತ್ಯವಿರುವ ಔಷಧಿ ಖರೀದಿ ಮಾಡಲಾಗುತ್ತಿದೆ. ಇದರಿಂದ ಅವಧಿ ಮುಗಿಯುವ ಔಷಧಿಗಳ ಸಂಖ್ಯೆ ತಪ್ಪಲಿದೆ. ಈಗಾಗಲೇ 232 ಕೋಟಿ ರೂಪಾಯಿಗಳಷ್ಟು ಔಷಧಿಗಳನ್ನು ಒದಗಿಸಲಾಗಿದೆ. ಈ ತಿಂಗಳು ಮತ್ತು ಮುಂದಿನ ತಿಂಗಳು ಪೂರೈಕೆ ಸಂಪೂರ್ಣವಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.

ಇದನ್ನೂ ಓದಿ: ಮೈಸೂರಿನ ರೇಷ್ಮೆ ಸೀರೆ ಉತ್ಪಾದನಾ ಘಟಕವನ್ನು  ಮುಚ್ಚುವುದಿಲ್ಲ: ಕೆ ವೆಂಕಟೇಶ್‌

Leave a Reply

Your email address will not be published. Required fields are marked *