DK Shivakumar: ಕೃಷ್ಣಾ ಮೇಲ್ದಂಡೆ ಯೋಜನೆ: ಕಾನೂನು ಸಮಸ್ಯೆ ಇಲ್ಲ ಎಂದ ಡಿಸಿಎಂ

DK Shivakumar talks about krishna river project

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅಧಿಸೂಚನೆಗೆ ಯಾವುದೇ ಕಾನೂನಿನ ತೊಡಕಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. 

ಯಾವುದೇ ಕಾನೂನು ಸಮಸ್ಯೆ ಇಲ್ಲ

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಅಧಿಸೂಚನೆಗೆ ಯಾವುದೇ ಕಾನೂನು ತೊಡಕಿಲ್ಲ, ತಡೆಯಾಜ್ಞೆಯೂ ಇಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ.

ಸದ್ಯದಲ್ಲಿ ಸರ್ವಪಕ್ಷಗಳ ಸಭೆ

ಈ ಕುರಿತು ಸದ್ಯದಲ್ಲೇ ರಾಜ್ಯದಲ್ಲಿಯೂ ಸರ್ವಪಕ್ಷಗಳ ಸಭೆ ಕರೆಯಲಾಗುವುದು ಎಂದರು.  ದೆಹಲಿಯಲ್ಲಿ ನಡೆದ ರಾಜ್ಯದ ಸಂಸದರ ಸಭೆಯಲ್ಲಿ ರಾಜ್ಯದ ನೀರಾವರಿ ಯೋಜನೆಗಳ ಸ್ಥಿತಿಗತಿಗಳ ಬಗ್ಗೆ ಅವರಿಗೆ ವಿವರಿಸಲಾಗಿದೆ. ಸರ್ವಪಕ್ಷಗಳ ನಿಯೋಗದಿಂದ ಪ್ರಧಾನಿ ಭೇಟಿಗೆ ಒಮ್ಮತವೂ ಮೂಡಿದೆ. ಈ ವಿಚಾರದಲ್ಲಿ ಕಾನೂನು ತಜ್ಞರು ತಮ್ಮ ಸಲಹೆ ನೀಡಿದ್ದು, ಶೀಘ್ರದಲ್ಲಿಯೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.  ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಸಾಧಕ-ಬಾಧಕ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ LPG ಸಮಸ್ಯೆ, ಕೇಂದ್ರಕ್ಕೆ ಪತ್ರ ಬರೆದ ಸಿಎಂ

Leave a Reply

Your email address will not be published. Required fields are marked *