Narendra Modi: ಪ್ರಧಾನಿ ಭೇಟಿ ಮಾಡಿದ ಯುರೋಪಿಯನ್‌ ನಾಯಕರು

European Commission President meets narendra modi

ನವದೆಹಲಿ: ಇಂದು ದೆಹಲಿಯಲ್ಲಿ ನಡೆಯಲಿರುವ ಭಾರತ-ಯುರೋಪಿಯನ್‌ 16ನೇ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಹೈದರಾಬಾದ್‌ ಹೌಸ್‌ನಲ್ಲಿ ಭೇಟಿಯಾಗಿದ್ದಾರೆ.  

ದೇಶಗಳ ಸಂಬಂಧ ಗಟ್ಟಿ ಮಾಡಲು ಶೃಂಗಸಭೆ

ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಈ ಶೃಂಗಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಈ ನಾಯಕರ ಮಾತುಕತೆಯಲ್ಲಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಸುಮಾರು 20 ವರ್ಷಗಳ ಸುದೀರ್ಘ ಚರ್ಚೆಯ ನಂತರ, ಬಹುನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆಗಳು ಯಶಸ್ವಿಯಾಗಿ ಪೂರ್ಣಗೊಳಿಸುವ ನಿರೀಕ್ಷೆ ಇದೆ. ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಇಂಧನ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವುದು ಈ ಶೃಂಗಸಭೆಯ ಮುಖ್ಯ ಗುರಿಯಾಗಿದೆ.

ಒಪ್ಪಂದದಿಂದ ಎರಡೂ ದೇಶಕ್ಕೂ ಉತ್ತಮ ಲಾಭ

ಈ ಒಪ್ಪಂದದಿಂದ ಭಾರತೀಯ ಯುವ ವೃತ್ತಿಪರರು ಮತ್ತು ವಿದ್ಯಾರ್ಥಿಗಳಿಗೆ ಯುರೋಪಿಯನ್ ದೇಶಗಳಲ್ಲಿ ಉದ್ಯೋಗ ಹಾಗೂ ಶಿಕ್ಷಣಕ್ಕಾಗಿ ಹೆಚ್ಚಿನ ಅವಕಾಶಗಳು ಲಭ್ಯವಾಗಲಿವೆ. ಇದು ಉಭಯ ದೇಶಗಳ  ಮಾರುಕಟ್ಟೆಗಳ ನಡುವಿನ ಅಡೆತಡೆಗಳನ್ನು ಕಡಿಮೆ ಮಾಡಿ, ಆರ್ಥಿಕ ಬೆಳವಣಿಗೆಗೆ ವೇಗ ನೀಡಲಿದೆ. ಇದಕ್ಕೂ ಮುನ್ನ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ರಾಜ್‌ಘಾಟಕ್ಕೆ ತೆರಳಿ ಗಾಂಧೀಜಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.

ಇದನ್ನೂ ಓದಿ: ನಾಳೆಯಿಂದ ಕೇಂದ್ರ ಬಜೆಟ್‌ ಅಧಿವೇಶನ, ಇಂದು ಸರ್ವಪಕ್ಷ ಸಭೆ

Leave a Reply

Your email address will not be published. Required fields are marked *