ಬೆಂಗಳೂರು: ಅಪರಾಧ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಬೈರತಿ ಬಸವರಾಜು ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ.
ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ಆದೇಶ ಪ್ರಶ್ನಿಸಿ ಬಸವರಾಜು ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಮೌನವಾಗಿರುವಂತೆ ಹೈಕಮಾಂಡ್ ಸೂಚನೆ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಮೌನವಾಗಿರುವಂತೆ ಎಐಸಿಸಿ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದು, ಸೂಕ್ತ ಸಂದರ್ಭದಲ್ಲಿ ತೀರ್ಮಾನ ಕೈಗೊಳ್ಳಲಿದೆ ಎಂದರು. ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ಸೂಕ್ತ, ಸುರಕ್ಷತಾ ಕ್ರಮಗಳೊಂದಿಗೆ ಬೆಂಗಳೂರಿನಲ್ಲಿ ಐಪಿಎಲ್ ಪುನರಾರಂಭಕ್ಕೆ ರಾಜ್ಯ ಸಚಿವ ಸಂಪುಟ ಅನುಮತಿ ನೀಡಿರುವುದಾಗಿ ತಿಳಿಸಿದರು.
ಇದನ್ನೂ ಓದಿ: ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ, ಮೂಟೆ ಸಾಗಿಸುತ್ತಿದ್ದ ಗಾಡಿ ಹಿಡಿದ ನಂಜನಗೂಡು ಗ್ರಾಮಾಂತರ ಪೊಲೀಸರು
