ಬೆಂಗಳೂರು : ಸಮಸ್ಯೆ ಮತ್ತು ಜೀವನಶೈಲಿ ಚಿತ್ರಿಸುವಲ್ಲಿ ಓಟಿಟಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಕಾಸರವಳ್ಳಿ (Girish Kasaravalli) ಅಭಿಪ್ರಾಯಪಟ್ಟಿದ್ದಾರೆ.
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, 30 ವರ್ಷಗಳ ಹಿಂದೆ ಟೆಲಿವಿಷನ್ ಬೆಳವಣಿಗೆಯಿಂದ ಉಂಟಾದ ಒಳ್ಳೆಯ ಸಂಗತಿಯೆಂದರೆ, ಒಬ್ಬ ನಟಿ ಸ್ಟಾರ್ ಆಗಬೇಕಾದರೆ ಆಕೆ ಎಷ್ಟೇ ಪ್ರತಿಭಾವಂತಳಾಗಿದ್ದರೂ, ಸುಂದರವಾಗಿರಬೇಕು ಎಂಬ ನಂಬಿಕೆ ಇತ್ತು. ಪ್ರತಿಭೆ ಎರಡನೇ ಸ್ಥಾನದಲ್ಲಿತ್ತು. ಆದರೆ, ಟಿವಿ ಮಾಧ್ಯಮ ಬಂದ ಮೇಲೆ ಪ್ರತಿಭೆ ಇರುವವರನ್ನು ನೇರವಾಗಿ ಸಾಮಾನ್ಯ ಜನರ ಮಧ್ಯದಿಂದಲೇ ಆಯ್ಕೆ ಮಾಡಲು ಆರಂಭಿಸಲಾಯಿತು ಎಂದು ಹೇಳಿದರು.
ವೆಬ್ ಸೀರೀಸ್ ಬಹಳ ಪರಿಣಾಮಕಾರಿ
ಇಂದಿನ ದಿನಗಳಲ್ಲಿ ವೆಬ್ ಸೀರೀಸ್‌ಗಳು ಬಹಳ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿವೆ. ಆ ನಿಟ್ಟಿನಲ್ಲಿ ನಾವು ಓಟಿಟಿಯೊಂದಿಗೆ ಹೆಜ್ಜೆ ಹಾಕಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ: ನಟ ವಿಜಯ್‌ಗೆ ಹಿನ್ನೆಡೆ, ಜನ ನಾಯಗನ್ ಸಿನಿಮಾಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ
