Good News: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆನೆ ಕಾರ್ಯಪಡೆ ಆರಂಭ

Good News for Dakshina kannada people regarding elephant issue

ದಕ್ಷಿಣ ಕನ್ನಡ: ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಾದ ಆನೆ ಕಾರ್ಯಪಡೆಯನ್ನು ರಚನೆ ಮಾಡಿ ರಾಜ್ಯ ಸರ್ಕಾರ (Good News) ಮಹತ್ವದ ಆದೇಶ ಹೊರಡಿಸಿದೆ. ಕಾಡಂಚಿನ ಜನವಸತಿ, ಕೃಷಿ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಈ ಕಾರ್ಯಪಡೆ ಕಾರ್ಯನಿರ್ವಹಿಸಲಿದೆ. 

ಯಾರೆಲ್ಲಾ ಇರಲಿದ್ದಾರೆ ಈ ಕಾರ್ಯಪಡೆಯಲ್ಲಿ?

ಈ ಕಾರ್ಯಪಡೆಯಲ್ಲಿ ಒಬ್ಬರು ಉಪ ವಲಯ ಅರಣ್ಯಾಧಿಕಾರಿ, ಇಬ್ಬರು ಗಸ್ತು ಅರಣ್ಯ ಪಾಲಕರು, 25 ವಾಹನ ಚಾಲಕರು ಅಥವಾ ತತ್ಸಮಾನ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಈ ಆನೆ ಕಾರ್ಯಪಡೆಯ ಕೇಂದ್ರ ಸ್ಥಾನವು ಸುಳ್ಯ ಆಗಿದ್ದು, ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ದೇಶನದ ಅಡಿಯಲ್ಲಿ ಕಾರ್ಯನಿರ್ವಹಿಸಲಿದೆ.

ಹೆಚ್ಚಾಗಿದ್ದ ಆನೆಯ ಕಾಟ

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಸುಳ್ಯ, ಬೆಳ್ತಂಗಡಿ, ಪುತ್ತೂರು, ಪಂಜ ಮತ್ತು ಸುಬ್ರಹ್ಮಣ್ಯ ವಲಯ ವ್ಯಾಪ್ತಿಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಪ್ರತಿ ವರ್ಷ ಬೆಳೆ ಹಾನಿ ಹಾಗೂ ಮಾನವ ಸಾವಿನ ಪ್ರಕರಣಗಳು ಏರಿಕೆಯಾಗುತ್ತಿರುವುದನ್ನು ಸರ್ಕಾರದ ಗಮನಕ್ಕೆ ತಂದು ಕ್ರಮಕ್ಕಾಗಿ ಒತ್ತಾಯಿಸಲಾಗಿತ್ತು.

ಇದನ್ನೂ ಓದಿ: ಬೆಂಗಳೂರು ಕರಗಾಗೆ ದಿನಗಣನೆ, ಆಯುಕ್ತರಿಂದ ಸ್ಥಳ ಪರಿಶೀಲನೆ

Leave a Reply

Your email address will not be published. Required fields are marked *