HD Kumaraswamy: ರಾಜ್ಯ ಸರ್ಕಾರ ರೈತರಿಗೆ ವಂಚನೆ ಮಾಡುತ್ತಿದೆ: ಎಚ್‌ಡಿ ಕುಮಾರಸ್ವಾಮಿ

HD Kumaraswamy oppose land acquisition

ಬೆಂಗಳೂರು: ಅಭಿವೃದ್ಧಿಯ ಹೆಸರಿನಲ್ಲಿ ರಾಜ್ಯ ಸರ್ಕಾರ ಹಲವೆಡೆ ಭೂಸ್ವಾಧೀನ ಮಾಡಿಕೊಳ್ಳುತ್ತಿದ್ದು, ಕೃಷಿ ಭೂಮಿಯನ್ನು  ವಶಪಡಿಸಿಕೊಂಡು, ರೈತರಿಗೆ ವಂಚನೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ (HD Kumaraswamy) ಆರೋಪ ಮಾಡಿದ್ದಾರೆ.

ಕೃಷಿಭೂಮಿ ಸ್ವಾಧೀನ ಕೈಬಿಡಬೇಕು

ಭೈರಮಂಗಲ ಗ್ರಾಮದಲ್ಲಿ ನಿನ್ನೆ ಸಚಿವರು ಈ ವಿಚಾರವಾಗಿ ಮಾತನಾಡಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಬಿಡಿದಿಯ ಬೈರಮಂಗಲದಲ್ಲೂ ರೈತರ ಕೃಷಿಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವುದನ್ನು  ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಆಗ್ರಹ ಮಾಡಿದ್ದಾರೆ. ರೈತರ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಸ್ವಾಧೀನಪಡಿಸಿಕೊಳ್ಳಬಾರದು. ಈ ಬಗ್ಗೆ ಮುಖ್ಯಮಂತ್ರಿಯವರು ಕೂಡಲೇ ರೈತರೊಂದಿಗೆ ಸಭೆ ನಡೆಸಬೇಕು ಎಂದು ಆಗ್ರಹ ಮಾಡಿದ್ದಾರೆ.

ಇದನ್ನೂ ಓದಿ: ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ರಾಜೀವ್‌ ಗೌಡ ಬಂಧನ

Leave a Reply

Your email address will not be published. Required fields are marked *