Ajit Pawar: ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯರ ಸಂತಾಪ, ಡಿಕೆಶಿ-ಹೆಚ್‌ಡಿಕೆ ಟ್ವೀಟ್

hdk and dk shivakumar on maharashtra dcm Ajit Pawar death

ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ (Ajit Pawar) ಸೇರಿದಂತೆ 5 ಜನರು ಸಾವಿಗೀಡಾಗಿದ್ದು, ಅಜಿತ್‌ ಪವಾರ್‌ ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಂತಾಪ ಸೂಚನೆ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್‌

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ಸಾವಿಗೀಡಾಗಿರುವ ವಿಚಾರ ತಿಳಿದು ನಿಜಕ್ಕೂ ಆಘಾತವಾಗಿದೆ. ಇದು ತೀವ್ರ ದುಃಖವಾಗಿದೆ ಎಂದು ಡಿಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. ಅಲ್ಲದೇ, ಅಜಿತ್‌ ಪವಾರ್‌ ಅಚೆ ಹಠಾತ್‌ ನಿಧನ ಮಹಾರಾಷ್ಟ್ರ ರಾಜಕೀಯಕ್ಕೆ ತುಂಬಲಾರದ ನಷ್ಟವಾಗಿದೆ.  ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಈ ದುಃಖದ ಸಮಯದಲ್ಲಿ ದೇವರು ಶಕ್ತಿ ನೀಡಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

ತೀವ್ರ ಆಘಾತ ಉಂಟಾಯಿತು ಎಂದು ಹೆಚ್‌ಡಿ ಕುಮಾರಸ್ವಾಮಿ

ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ಅಕಾಲಿಕ ಮರಣ ಹೊಂದಿದರು ಎಂಬ ವಾರ್ತೆ ತಿಳಿದು ತೀವ್ರ ಆಘಾತ ಉಂಟಾಯಿತು. ಮಹಾರಾಷ್ಟ್ರದ ಪ್ರಭಾವೀ ನಾಯಕರಾಗಿದ್ದ ಅವರು, ಅಪಾರ ಜನಪ್ರಿಯತೆ ಗಳಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ. ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಶ್ರೀಮತಿ ಸುನೇತ್ರಾ ಪವಾರ್ ಅವರು, ಸುಪುತ್ರ ಶ್ರೀ ಪಾರ್ಥ್ ಪವಾರ್ ಅವರು ಮತ್ತು ಇಡೀ ಕುಟುಂಬಕ್ಕೆ, ಪವಾರ್ ಅವರ ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಈ ಕಷ್ಟದ ಸಮಯದಲ್ಲಿ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರೆಲ್ಲರಿಗೂ ನೀಡಲಿ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರೂ ಸಹ ಟ್ವೀಟ್‌ ಮಾಡಿ ಸಂತಾಪ ಸೂಚನೆ ಮಾಡಿದ್ದಾರೆ.

ಇದನ್ನೂ ಓದಿ: ಭೀಕರ ವಿಮಾನ ಅಪಘಾತ, ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ದುರ್ಮರಣ

Leave a Reply

Your email address will not be published. Required fields are marked *