Tag: politics

  • ಜಯನಗರ ಶಾಸಕರಿಗೆ ಸುಪ್ರೀಂ ಶಾಕ್‌, ಸಿಕೆ ರಾಮಮೂರ್ತಿ ಅರ್ಜಿ ವಜಾ ಮಾಡಿದ ಕೋರ್ಟ್

    ಜಯನಗರ ಶಾಸಕರಿಗೆ ಸುಪ್ರೀಂ ಶಾಕ್‌, ಸಿಕೆ ರಾಮಮೂರ್ತಿ ಅರ್ಜಿ ವಜಾ ಮಾಡಿದ ಕೋರ್ಟ್

    ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕೊನೆಯ ಕ್ಷಣದಲ್ಲಿ ಶಾಸಕ ಸ್ಥಾನ ಪಡೆದಿದ್ದ ಜಯನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಸಿಕೆ ರಾಮಮೂರ್ತಿಗೆ (CK Ramamurthy) ಸುಪ್ರೀಂಕೋರ್ಟ್‌ನಲ್ಲಿ (Supreme Court) ಭಾರೀ ಹಿನ್ನೆಡೆಯಾಗಿದೆ.

    ಹೌದು, ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ವಿರುದ್ಧ ಬಿಜೆಪಿ ಅಭ್ಯರ್ಥಿ ಸಿಕೆ ರಾಮಮೂರ್ತಿ ಗೆಲುವು ಸಾಧಿಸಿದ್ದರು. ಆದರೆ ಈ ವಿಚಾರವಾಗಿ ಅನೇಕ ಗೊಂದಲಗಳು ಉಂಟಾಗಿದ್ದವು. ಕೊನೆಯ ಹಂತದಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವನ್ನ ಘೋಷಿಸಲಾಗಿತ್ತು. ಆದರೆ ಈ ಗೆಲುವಿನ ಬಗ್ಗೆ ಕಾಂಗ್ರೆಸ್ ನಾಯಕಿ ಸೌಮ್ಯಾ ರೆಡ್ಡಿ ಅನುಮಾನ ವ್ಯಕ್ತಪಡಿಸಿದ್ದರು. ಹಾಗಾಗಿ ಫಲಿತಾಂಶದ ಬಗ್ಗೆ ಸೌಮ್ಯಾ ರೆಡ್ಡಿ ಸಿಕೆ ರಾಮಮೂರ್ತಿ ವಿರುದ್ಧ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.ಈ ಮೊದಲು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಸೌಮ್ಯ ರೆಡ್ಡಿ ಅವರಿಗೆ ಗೆಲುವು ಸಿಕ್ಕಿತ್ತು, ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ DVD ಸೇರಿ ಪ್ರಮುಖ 10 ದಾಖಲೆ ಹಾಜರುಪಡಿಸಬೇಕು ಎಂದು ಆದೇಶ ನೀಡಿತ್ತು. ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ರಾಮಮೂರ್ತಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದ್ದು, ಹಾಲಿ ಶಾಸಕರಿಗೆ ಆಘಾತ ಎದುರಾಗಿದೆ ಎನ್ನಬಹುದು.

    ದಾಖಲೆಗಳನ್ನ ಸಲ್ಲಿಸುವಂತೆ ಆದೇಶೀಸಿದ್ದ ಹೈಕೋರ್ಟ್‌
    ಪರಾಜಿತ ಅಭ್ಯರ್ಥಿ ಸೌಮ್ಯರೆಡ್ಡಿಗೆ ಫೆ.14 ರಂದು ಹೈಕೋರ್ಟ್ ಡಿವಿಡಿ ಸೇರಿ 10 ದಾಖಲೆ ಹಾಜರುಪಡಿಸಲು ಹೈಕೋರ್ಟ್ ಆದೇಶ ನೀಡಿತ್ತು. ಈ ಬಗ್ಗೆ ಹಾಲಿ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನ ವಜಾ ಮಾಡಿರುವ ಸುಪ್ರಿಂ ಕೋರ್ಟ್‌ ಸೌಮ್ಯ ರೆಡ್ಡಿ ಸಲ್ಲಿಸಿರುವ ದಾಖಲೆಗಳಿಗೆ ಲಿಖಿತ ಹೇಳಿಕೆ ಸಲ್ಲಿಸಬಹುದು, ಕೇವಲ ೩ ವಾರದಲ್ಲಿ ಹೇಳಿಕೆ ನೀಡಬೇಕು ಎಂದು ತಿಳಿಸಿದೆ.

    ಏನಿದು ಪ್ರಕರಣ?
    2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಕೊನೆಯ ಕ್ಷಣದಲ್ಲಿ ಬದಲಾಗಿತ್ತು. ಬಿಜೆಪಿ ಅಭ್ಯರ್ಥಿ ಸಿ.ಕೆ. ರಾಮಮೂರ್ತಿ 16 ಮತಗಳ ಅಂತರದಿಂದ ಗೆದ್ದಿದ್ದರು. ಆದರೆ ಇದಕ್ಕೂ ಮೊದಲು ಆಗಿನ ಶಾಸಕಿ ಸೌಮ್ಯ ರೆಡ್ಡಿಗೆ ಗೆಲುವು ಕಂಡಿದ್ದಾರೆ ಎಂದು ಘೋಷಿಸಲಾಗಿತ್ತು. ಆದರೆ ಅಂಚೆ ಮತಗಳ ಪುನರ್ ಪರಿಶೀಲನೆಯಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್ಚಿನ ಮತ ಪಡೆದಿದ್ದಾರೆ ಎಂದು ಘೋಷಣೆ ಮಾಡಲಾಯಿತು. ತಡರಾತ್ರಿಯ ತನಕ ಮತ ಏಣಿಕೆ ನಡೆಸಿದ್ದು, ರಾತ್ರಿ ೧೨ ಗಂಟೆಗೆ ಫಲಿತಾಂಶ ಘೋಷಿಸಲಾಗಿತ್ತು. ಆದರೆ ಈ ಫಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸೌಮ್ಯ ರೆಡ್ಡಿ, ಈ ವಿಚಾರವಾಗಿ ಕೋರ್ಟ್‌ ಮೆಟ್ಟಿಲೇರಿದ್ದಾರೆ.