Jai Shankar: ಭಾರತದ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರದಿಂದ ಸೂಕ್ತ ಕ್ರಮ

Jai Shankar tells about india steps to protect country

ನವದೆಹಲಿ: ಭಾರತದ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುವ ಹಿಂದೂ ಮಹಾಸಾಗರ ಪ್ರದೇಶದಲ್ಲಿನ , ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ  ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ (Jai Shankar) ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಭಾರತ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದೆ

 ಹಿಂದೂ ಮಹಾಸಾಗರದಲ್ಲಿ ಭಾರತದ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.  ಹಿಂದೂ ಮಹಾಸಾಗರ ಪ್ರದೇಶ ಸೇರಿದಂತೆ , ದೇಶಗಳೊಂದಿಗಿನ ಭಾರತದ ಸಂಬಂಧಗಳು ತಮ್ಮದೇ ಆದ ನೆಲೆಯಲ್ಲಿ ನಿಂತಿವೆ ಮತ್ತು ಆ ದೇಶಗಳು ಮೂರನೇ ದೇಶಗಳೊಂದಿಗೆ ಹೊಂದಿರುವ ಸಂಬಂಧಗಳು ಸ್ವತಂತ್ರವಾಗಿವೆ ಎಂದು ಅವರು ಹೇಳಿದ್ದಾರೆ.  ನೆರೆಹೊರೆಯಲ್ಲಿ ಪ್ರಾದೇಶಿಕ ಸಹಕಾರವನ್ನು ಬಲಪಡಿಸಲು, ಭಾರತ ತನ್ನ ಪಾಲುದಾರರೊಂದಿಗೆ ಕೆಲಸ ಮಾಡುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ LPG ಪೂರೈಕೆಯಲ್ಲಿ ಯಾವುದೇ ಸಮಸ್ಯೆಗಳಿಲ್ಲ: ಕೇಂದ್ರ

Leave a Reply

Your email address will not be published. Required fields are marked *