TOP NEWS

Mollywood: ನಟ ವಿನಾಯಕನ್‌ಗೆ ಹೊಸ ಕಾನೂನು ಸಂಕಷ್ಟ: FIR ದಾಖಲು!

Jailer actor Vinayakan booked for allegedly sharing minor girls photo phone number on Facebook

ಕೇರಳ: ರಜನಿಕಾಂತ್ ನಟನೆಯ ‘ಜೈಲರ್’ ಚಿತ್ರದ ಖಳನಾಯಕನ ಪಾತ್ರದ ಮೂಲಕ ದೇಶಾದ್ಯಂತ ಸದ್ದು ಮಾಡಿದ್ದ ಮಲಯಾಳಂನ ಖ್ಯಾತ ನಟ ವಿನಾಯಕನ್ ಈಗ ಮತ್ತೊಮ್ಮೆ ದೊಡ್ಡ ಕಾನೂನು (Mollywood) ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಹಿಳೆಯ ಘನತೆಗೆ ಧಕ್ಕೆ ತಂದಿರುವುದು ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿರುವ ಗಂಭೀರ ಆರೋಪದಡಿ ಕೇರಳದ ಆಲಪ್ಪುಳ ಜಿಲ್ಲೆಯ ಮಾವೇಲಿಕ್ಕರ ಪೊಲೀಸರು ನಟನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಕೇರಳ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನೀಡಿದ ಕಟ್ಟುನಿಟ್ಟಿನ ಆದೇಶದ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಈ ಘಟನೆ ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ನಡೆದಿತ್ತು. ಮೂಲತಃ ಕೇರಳದ ಆಲಪ್ಪುಳದವರಾಗಿದ್ದು, ಸದ್ಯ ಮುಂಬೈನಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ಈ ಸಂಬಂಧ ದೂರು ನೀಡಿದ್ದಾರೆ. ದೂರುದಾರರು ನಟ ವಿನಾಯಕನ್ ಅವರಿಗೆ ಸಂಬಂಧಿಸಿದ ಫೇಸ್‌ಬುಕ್ ಪೋಸ್ಟ್ ಒಂದನ್ನು ವಾಟ್ಸಾಪ್ ಮೂಲಕ ನಟನಿಗೆ ಫಾರ್ವರ್ಡ್ ಮಾಡಿದ್ದರು. ಇದರಿಂದ ತೀವ್ರ ಕೋಪಗೊಂಡ ವಿನಾಯಕನ್, ದೂರುದಾರರ ವಾಟ್ಸಾಪ್ ಪ್ರೊಫೈಲ್ ಚಿತ್ರದ ಸ್ಕ್ರೀನ್‌ಶಾಟ್ ತೆಗೆದುಕೊಂಡು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಆ ಪ್ರೊಫೈಲ್ ಚಿತ್ರದಲ್ಲಿ ದೂರುದಾರರ ಎಂಟು ವರ್ಷದ ಹೆಣ್ಣು ಮಗುವಿನ ಫೋಟೋ ಇತ್ತು. ಮಗುವಿನ ಫೋಟೋ ಜೊತೆಗೆ ದೂರುದಾರರ ಮೊಬೈಲ್ ಸಂಖ್ಯೆಯನ್ನು ಪ್ರಕಟಿಸಿದ್ದ ನಟ, ಅದರ ಜೊತೆಗೆ ಅತ್ಯಂತ ಅಶ್ಲೀಲ ಮತ್ತು ಆಕ್ಷೇಪಾರ್ಹ ಕಮೆಂಟ್‌ಗಳನ್ನು ಬರೆದುಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಟ ವಿನಾಯಕನ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಫೋನ್ ನಂಬರ್ ಮತ್ತು ಮಗುವಿನ ಫೋಟೋ ಹಾಕಿದ ಬೆನ್ನಲ್ಲೇ, ಅಪರಿಚಿತರಿಂದ ದೂರುದಾರರಿಗೆ ಸಾಲು ಸಾಲು ಕರೆಗಳು ಬರಲಾರಂಭಿಸಿದ್ದವು. ಫೋನ್ ಮಾಡಿದ ಅನೇಕರು ದೂರುದಾರರನ್ನು ತೀವ್ರವಾಗಿ ನಿಂದಿಸಿ, ಅವಾಚ್ಯ ಶಬ್ದಗಳಿಂದ ಬೈದಿದ್ದರು. ಇದರಿಂದ ಬೇಸತ್ತ ಮಗುವಿನ ತಂದೆ, ಕಾನೂನು ಕ್ರಮ ಜರುಗಿಸುವಂತೆ ಕೋರಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮೊರೆ ಹೋಗಿದ್ದರು. ಆಲಪ್ಪುನಟ ವಿನಾಯಕನ್‌ಗೆ ಹೊಸ ಕಾನೂನು ಸಂಕಷ್ಟ: ಮಗುವಿನ ಫೋಟೋ ಹಂಚಿಕೊಂಡು ಅಶ್ಲೀಲ ನಿಂದನೆ ಮಾಡಿದ ಆರೋಪದಡಿ FIR ದಾಖಲು!ಳದಲ್ಲಿ ನಡೆದ ಆಯೋಗದ ಸಭೆಯಲ್ಲಿ ಈ ದೂರನ್ನು ಪರಿಶೀಲಿಸಿದ ಅಧಿಕಾರಿಗಳು, ನಟನ ವಿರುದ್ಧ ತಕ್ಷಣವೇ ಪ್ರಕರಣ ದಾಖಲಿಸುವಂತೆ ಮಾವೇಲಿಕ್ಕರ ಪೊಲೀಸರಿಗೆ ನಿರ್ದೇಶನ ನೀಡಿದ್ದರು. ಸದ್ಯ ಪೊಲೀಸರು ಐಟಿ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ನಟ ವಿನಾಯಕನ್ ವಿವಾದಗಳಲ್ಲಿ ಸಿಲುಕುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ತಮ್ಮ ಸಾರ್ವಜನಿಕ ನಡವಳಿಕೆ, ವೇದಿಕೆಗಳ ಮೇಲಿನ ವಿವಾದಾತ್ಮಕ ಹೇಳಿಕೆಗಳು ಹಾಗೂ ಕೇರಳದ ಮಾಜಿ ಮುಖ್ಯಮಂತ್ರಿ ದಿವಂಗತ ಉಮ್ಮನ್ ಚಾಂಡಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಡಿದ್ದ ನಿಂದನಾತ್ಮಕ ಮಾತುಗಳಿಂದ ಭಾರಿ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿದ್ದರು. ಇಷ್ಟೆಲ್ಲಾ ವಿವಾದಗಳ ನಡುವೆಯೂ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ವಿನಾಯಕನ್, ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ರಜನಿಕಾಂತ್ ಅವರ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾದ ಚಿತ್ರದ ಗ್ಲಿಂಪ್ಸ್ ವಿಡಿಯೋದಲ್ಲೂ ವಿನಾಯಕನ್ ಅವರ ಝಲಕ್ ಕಾಣಿಸಿಕೊಂಡಿತ್ತು.

ಇದನ್ನೂ ಓದಿ: ಧುರಂಧರ್’ ಚಿತ್ರರಂಗದ ಚಹರೆಯನ್ನೇ ಬದಲಾಯಿಸಿದೆ: ನಟ ಸೈಫ್ ಅಲಿ ಖಾನ್ ಪ್ರಶಂಸೆ!

Leave a Reply

Your email address will not be published. Required fields are marked *