ಬೆಂಗಳೂರು: ಕರ್ನಾಟಕ ಸೇರಿದಂತೆ ಗೋವಾ, ಗುಜರಾತ್, ಮಹಾರಾಷ್ಟ್ರ, ನಾಗಾಲ್ಯಾಂಡ್ ಮತ್ತು ತ್ರಿಪುರಾದ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆಯ (By Election) ವೇಳಾಪಟ್ಟಿ ಪ್ರಕಟಿಸಲಾಗಿದೆ.
ಯಾವೆಲ್ಲಾ ಕ್ಷೇತ್ರಕ್ಕೆ ಉಪಚುನಾವಣೆ?
ಈ ಕುರಿತು ನವದೆಹಲಿಯಲ್ಲಿಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸುದ್ದಿಗೋಷ್ಠಿಯ ಮೂಲಕ ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ಮಾಜಿ ಶಾಸಕ ಮೇಟಿ ಹುಲ್ಲಪ್ಪ ಯಮನಪ್ಪ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರ ಹಾಗೂ ಮಾಜಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ನಾಳೆ ಗೆಜೆಟ್ ಅಧಿಸೂಚನೆ ಹೊರಡಿಸಲಾಗುವುದು.
ಮಾರ್ಚ್ 23ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ
ಇದೇ 23ರವರೆಗೆ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದ್ದು, ಇದೇ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಇದೇ 26ರೊಳಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆಯಬಹುದಾಗಿದೆ. ಏಪ್ರಿಲ್ 9 ರಂದು ಮತದಾನ ನಡೆಯಲಿದ್ದು, ಮೇ 4ರಂದು ಮತ ಎಣಿಕೆ ನಡೆಯಲಿದೆ.
ಇದನ್ನೂ ಓದಿ: ಅಡುಗೆ ಅನಿಲ ವಿಚಾರದಲ್ಲಿ ರಾಜಕೀಯ ಬೇಡ: ಬಸವರಾಜ್ ಬೊಮ್ಮಾಯಿ
