ಬೆಂಗಳೂರು: ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಕೆ.ಎಂ.ಎಫ್ (KMF) 2026ರ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿ ತಂಡಕ್ಕೆ ಪ್ರಾಯೋಕತ್ವ ನೀಡಿದೆ.
4 ಕೋಟಿ ವೆಚ್ಚದಲ್ಲಿ ಟೆಂಡರ್
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ, ಒಟ್ಟು ನಾಲ್ಕು ಕೋಟಿ ರೂಪಾಯಿ ವೆಚ್ಚದಲ್ಲಿ ಕೆ.ಎಂ.ಎಫ್ ಒಂದು ವರ್ಷದ ಟೆಂಡರ್ ಪಡೆದಿದೆ ಎಂದು ತಿಳಿಸಿದ್ದಾರೆ. ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆರ್‌ಸಿಬಿ ತಂಡದ ಮೂಲಕ ನಂದಿನಿ ಉತ್ಪನ್ನಗಳು ದೇಶಕ್ಕೆ ಪರಿಚಯವಾಗಲಿವೆ ಎಂದು ಹೇಳಿದ್ದಾರೆ. ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ದೇವದತ್ ಪಡಿಕಲ್ ಕೆಎಂಎಫ್ ಉತ್ಪನ್ನದ ಪ್ರಚಾರ ರಾಯಭಾರಿಯಾಗಿದ್ದಾರೆ.
ಇದನ್ನೂ ಓದಿ: ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕ ಅನುಮೋದನೆ
