ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅಗತ್ಯವಿದ್ದರೆ ಹೈಕಮಾಂಡ್ ದೆಹಲಿಗೆ ಕರೆಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿದ್ದಾರೆ.
ಕೇಂದ್ರದ ವಿರುದ್ಧ ವಾಗ್ದಾಳಿ
ಬೆಂಗಳೂರಿನಲ್ಲಿಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಉಭಯ ನಾಯಕರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಮೈಸೂರಿನಲ್ಲಿ ಭೇಟಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಇದೇ ವೇಳೆ, ಮನ್ರೇಗಾ ರದ್ದತಿ ಕುರಿತಂತೆ ಕೇಂದ್ರ ಸರ್ಕಾರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ಈ ಯೋಜನೆಯನ್ನು ದುರ್ಬಲಗೊಳಿಸುತ್ತಿದೆ ಎಂದು ತಿಳಿಸಿದ್ದಾರೆ.
