Melukote: ಮಾರ್ಚ್ 23 ರಿಂದ ಮೇಲುಕೋಟೆ ವೈರಮುಡಿ ಉತ್ಸವ

Melukote vairamudi utsava preparation begins

ಮಂಡ್ಯ: ಇದೇ 23 ರಿಂದ ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ (Melukote) ನಡೆಯಲಿರುವ ವಿಶ್ವ ವಿಖ್ಯಾತ ವೈರಮುಡಿ ಬ್ರಹ್ಮೋತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಸೂಕ್ತ ಕ್ರಮ ವಹಿಸಬೇಕೆಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದ್ದಾರೆ.

ಶಾಸಕರಿಂದ ಪೂರ್ವಭಾವಿ ಸಭೆ

ಮೇಲುಕೋಟೆ ಪ್ರವಾಸಿ ಮಂದಿರದಲ್ಲಿ ನಡೆದ ಮೇಲುಕೋಟೆಯ ಐತಿಹಾಸಿಕ ವೈರಮುಡಿ ಬ್ರಹ್ಮೋತ್ಸವದ ಪೂರ್ವಭಾವಿ ಸಿದ್ಧತೆಗಳ ಕುರಿತು  ಮಾತನಾಡಿದ ಅವರು, ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಕಟ್ಟುನಿಟ್ಟಿನ ಭದ್ರತೆ, ಸುಗಮ ಜನಸಂದಣಿ ನಿರ್ವಹಣೆ ಮತ್ತು ಕುಡಿಯುವ ನೀರಿನ ವ್ಯವಸ್ಥೆಗೆ ಆದ್ಯತೆ ನೀಡಲು ಸೂಚಿಸಿದರು.

ಬ್ಯಾರಿಕೆಡ್ ವ್ಯವಸ್ಥೆ ಅಳವಡಿಕೆ

 ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಕುಮಾರ, ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ಮಾರ್ಚ್ 28 ರಂದು ನಡೆಯುವ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವದ ಅದ್ಧೂರಿ ಉತ್ಸವದಲ್ಲಿ ಭಕ್ತಾದಿಗಳಿಗೆ ದರ್ಶನಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಬ್ಯಾರಿಕೆಡ್ ವ್ಯವಸ್ಥೆ ಅಳವಡಿಸಬೇಕು ಹೇಳಿದ್ದಾರೆ.

ಇದನ್ನೂ ಓದಿ: ವಿಧಾನಸಭೆ ಉಪಚುನಾವಣೆ: ಹೈಕಮಾಂಡ್‌ ತೀರ್ಮಾನ ಅಂತಿಮ: ಡಿಕೆ ಶಿವಕುಮಾರ್

Leave a Reply

Your email address will not be published. Required fields are marked *