ಬೆಂಗಳೂರು ಗ್ರಾಮಾಂತರ: ಸಂಕಷ್ಟದಲ್ಲಿರುವ ನೇಕಾರರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ, ನೇಕಾರ ಮುಖಂಡರ ನಿಯೋಗದೊಂದಿಗೆ ದೆಹಲಿಗೆ ತೆರಳಿ ಸಂಬಂಧಪಟ್ಟ ಸಚಿವರಿಗೆ ಹಾಗೂ ಇಲಾಖೆಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಸಂಸದ ಡಾ. ಕೆ. ಸುಧಾಕರ್ (K Sudhakar) ತಿಳಿಸಿದ್ದಾರೆ.
ಸ್ಥಳೀಯ ಉದ್ಯಮಗಳಿಗೆ ಉತ್ತೇಜನ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ‘ದೊಡ್ಡಬಳ್ಳಾಪುರ ಸೀರೆ ಸಂತೆ’, ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಅವರು ಇಂದು ಭೇಟಿ ನೀಡಿದರು. ಬಳಿಕ ಮಾತನಾಡಿದ ಸಂಸದರು, “ಪ್ರಧಾನಿ ನರೇಂದ್ರ ಮೋದಿ ಅವರ ‘ವೋಕಲ್ ಫಾರ್ ಲೋಕಲ್’ ಸ್ವದೇಶಿ ಪರಿಕಲ್ಪನೆಗೆ ಪೂರಕವಾಗಿ ಸ್ಥಳೀಯ ಉದ್ಯಮಗಳಿಗೆ ಉತ್ತೇಜನ ನೀಡಬೇಕಿದೆ” ಎಂದರು. “ನೇಕಾರರು ಮಾರುಕಟ್ಟೆ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವುದು ಗಮನಕ್ಕೆ ಬಂದಿದ್ದು, ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು” ಎಂದು ಭರವಸೆ ನೀಡಿದರು.
ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ: ಬಿವೈ ವಿಜಯೇಂದ್ರ
