ಅಸ್ಸಾಂ: ವಿಕಸಿತ ಭಾರತದ ಕಲ್ಪನೆಯ ಸಾಕಾರಕ್ಕೆ, ಈಶಾನ್ಯ ರಾಜ್ಯಗಳು ವಿಕಸಿತಗೊಳ್ಳಬೇಕು. ಈ ಹಿನ್ನೆಲೆಯಲ್ಲಿ, ಕಳೆದ ಹತ್ತು ವರ್ಷಗಳಲ್ಲಿ ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಹೇಳಿದ್ದರು.
ವಿಶ್ವದ ಕಣ್ಣು ಭಾರತದ ಮೇಲೆ
ಅಸ್ಸಾಂನ ಗುವಾಹಟಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಭಾರತ ಬೆಳಗುತ್ತಿದೆ. ಇಡೀ ವಿಶ್ವದ ಕಣ್ಣು ಭಾರತದ ಮೇಲೆ ನೆಟ್ಟಿದೆ. ಕಳೆದೊಂದು ದಶಕದಲ್ಲಿ ಭಾರತದ ಅರ್ಥವ್ಯವಸ್ಥೆ ಏರುಗತಿಯಲ್ಲಿ ಸಾಗಿದೆ ಎಂದು ಹೇಳಿದ್ದಾರೆ. ಈಶಾನ್ಯ ರಾಜ್ಯಗಳನ್ನು ಭಯೋತ್ಪಾದಕ ಮುಕ್ತ ನೆಲೆಯಾಗಿಸಿರುವ ಶ್ರೇಯಸ್ಸು NDA ಸರ್ಕಾರಕ್ಕೆ ಸಲ್ಲುತ್ತದೆ. ಕಾಂಗ್ರೆಸ್ ಅವಧಿಯಲ್ಲಿ, ಈಶಾನ್ಯ ರಾಜ್ಯಗಳನ್ನು ಕಡೆಗಣಿಸಲಾಗಿತ್ತು. ಇಲ್ಲಿ ಅಭಿವೃದ್ಧಿ ಎನ್ನುವುದು ಮರೀಚಿಕೆಯಾಗಿತ್ತು. ಆದರೆ ಇಂದಿನ ಚಿತ್ರಣ ಬದಲಾಗಿದೆ. ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳು ಇಡೀ ದೇಶದಲ್ಲಿ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ ಎಂದರು.
ಕುಮಾರ್ ಭಾಸ್ಕರ್ ವರ್ಮಾ ಸೇತುವೆ
ಇದಕ್ಕೂ ಮುನ್ನ ಪ್ರಧಾನಿ, 5 ಸಾವಿರದ 450 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಬಳಿಕ, ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಗುವಾಹಟಿ ಮತ್ತು ಉತ್ತರ ಗುವಾಹಟಿಯನ್ನು ಸಂಪರ್ಕಿಸುವ 3 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಕುಮಾರ್ ಭಾಸ್ಕರ್ ವರ್ಮಾ ಸೇತುವೆ ಹಾಗೂ ಕಾಮರೂಪ ಜಿಲ್ಲೆಯ ಅಮಿಂಗಾವ್ನಲ್ಲಿರುವ IIM ಗುವಾಹಟಿಯ ತಾತ್ಕಾಲಿಕ ಕ್ಯಾಂಪಸ್ ಮತ್ತು ಈಶಾನ್ಯ ಪ್ರದೇಶದ ರಾಷ್ಟ್ರೀಯ ದತ್ತಾಂಶ ಕೇಂದ್ರವನ್ನು ವಾಸ್ತವಿಕವಾಗಿ ಪ್ರಧಾನಿ ಉದ್ಘಾಟಿಸಿದರು.
ಜೊತೆಗೆ, ನಾಲ್ಕು ನಗರಗಳಿಗೆ PM-ಇಬಸ್ ಸೇವಾ ಯೋಜನೆಯಡಿ 225 ಎಲೆಕ್ಟ್ರಿಕ್ ಬಸ್ಗಳನ್ನು ಪ್ರಧಾನಿ ಉದ್ಘಾಟಿಸಿದರು. ಬೆಳಗ್ಗೆ ಪ್ರಧಾನಿ, ದಿಬ್ರುಗಢ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಭಿವೃದ್ಧಿಪಡಿಸಲಾದ ಮೋರನ್ ಬೈಪಾಸ್ನಲ್ಲಿ ತುರ್ತು ಲ್ಯಾಂಡಿಂಗ್ ಸೌಲಭ್ಯವನ್ನು ಪ್ರಧಾನಿ ಉದ್ಘಾಟಿಸಿದರು ಮತ್ತು ಯುದ್ಧವಿಮಾನಗಳು, ಸಾರಿಗೆ ವಿಮಾನಗಳು ಮತ್ತು ಹೆಲಿಕಾಪ್ಟರ್ಗಳ ವೈಮಾನಿಕ ಪ್ರದರ್ಶನವನ್ನು ವೀಕ್ಷಿಸಿದರು. ತುರ್ತು ಲ್ಯಾಂಡಿಂಗ್ ಸೌಲಭ್ಯವನ್ನು 100 ಕೋಟಿ ರೂ.ಗಳಲ್ಲಿ ನಿರ್ಮಿಸಲಾಗಿದೆ
ಇದನ್ನೂ ಓದಿ: 1.60 ಲಕ್ಷ ಕೋಟಿ ರೂಪಾಯಿ ಯೋಜನೆಗಳಿಗೆ ಕೇಂದ್ರ ಸಂಪುಟ ಒಪ್ಪಿಗೆ
