ಬೆಳಗಾವಿ: ರಾಜ್ಯದಲ್ಲಿ ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ವಿಧಾನಸಭೆಗೆ ತಿಳಿಸಿದ್ದಾರೆ.
ಶಿಕ್ಷಕರಿಗೆ ಅಗತ್ಯ ತರಬೇತಿ ನೀಡಲಾಗುತ್ತದೆ
ಪ್ರಶ್ನೋತ್ತರ ವೇಳೆಯಲ್ಲಿ ಶರಣು ಸಲಗಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಿಕ್ಷಕರಿಗೆ ಹೊರಗುತ್ತಿಗೆ ಮೂಲಕ ಅಗತ್ಯ ತರಬೇತಿ ನೀಡಲಾಗುವುದು. ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುವುದು ಎಂಬ ವದಂತಿ ನಿರಾಧಾರ ಎಂದು ಸ್ಪಷ್ಟಪಡಿಸಿದ್ದಾರೆ. ಗಡಿಭಾಗದಲ್ಲಿರುವ ಕನ್ನಡ ಶಾಲೆಗಳಿಗೆ ಶಿಕ್ಷಕರು ಸೇರಿದಂತೆ ಅಗತ್ಯ ಮೂಲಸೌಕರ್ಯವನ್ನು ಆದ್ಯತೆ ಮೇಲೆ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
5 ಸಾವಿರ ಹುದ್ದೆಗಳ ಶೀಘ್ರ ಭರ್ತಿ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5 ಸಾವಿರದ 267 ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ಹಾಗೂ ರಾಜ್ಯದ ಇತರ ಭಾಗಗಳಲ್ಲಿ ಖಾಲಿ ಇರುವ 5 ಸಾವಿರ ಹುದ್ದೆಗಳಿಗೆ ಶೀಘ್ರವೇ ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ. ದ್ವಿಭಾಷಾ ಮಾಧ್ಯಮ ಬೋಧನೆಗೆ ಶಿಕ್ಷಕರನ್ನು ನಿಯಮಾನುಸಾರ ನೇಮಕ ಮಾಡಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ
ಇದನ್ನೂ ಓದಿ: ಇದು ಸಿಎಂ ಸಿದ್ದರಾಮಯ್ಯ ಕೊನೆಯ ಅಧಿವೇಶನ, ಬಿವೈ ವಿಜಯೇಂದ್ರ ಲೇವಡಿ
