Airport: ಉತ್ತರ ಕರ್ನಾಟಕಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗ್ರಹ

north karnataka should get international Airport says bjp leader

ಬೆಂಗಳೂರು: ಉತ್ತರ ಕರ್ನಾಟಕದ ಅಭಿವೃದ್ಧಿ ಹಿನ್ನೆಲೆಯಲ್ಲಿ ದಾವಣಗೆರೆ ಇಲ್ಲವೇ, ಗದಗ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Airport) ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಬಿಜೆಪಿಯ ಹಿರಿಯ ಸದಸ್ಯ ಪಿ.ಎಚ್. ಪೂಜಾರ್ ವಿಧಾನಪರಿಷತ್ತಿನಲ್ಲಿಂದು ಒತ್ತಾಯ ಮಾಡಿದ್ದಾರೆ.

ವಿಮಾನ ನಿಲ್ದಾಣದ ಅಗತ್ಯ ತುಂಬಾ ಇದೆ

ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಉದ್ದಿಮೆಗಳು, ಕೈಗಾರಿಕೆಗಳು ತಲೆ ಎತ್ತಲು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ.

ಬೆಂಗಳೂರು ಸುತ್ತಮುತ್ತ ಆರಂಭಿಸಲು ಉದ್ದೇಶಿಸಿರುವ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉತ್ತರ ಕರ್ನಾಟಕದಲ್ಲಿ ಸ್ಥಳ ನಿಗದಿ ಮಾಡಿ, ಆರಂಭಿಸಿದರೆ ಎಲ್ಲರಿಗೂ ಅನುಕೂಲವಾಗಲಿದೆ ಎಂದರು. 

ಭಾರತಿ ಶೆಟ್ಟಿ, ವಿಬಿ ಜಿ ರಾಮ್ ಜಿ ಯೋಜನೆಯಿಂದ ರಾಜ್ಯದ ಕಾರ್ಮಿಕರಿಗೆ ಅನುಕೂಲವಾಗಲಿದೆ. ಹೊಸ ಯೋಜನೆಯಿಂದ  ಮಾನವ ದಿನಗಳು ಹೆಚ್ಚಿಗೆ ಸಿಗಲಿವೆ. ಸಕಾಲದಲ್ಲಿ ವೇತನ ಪಾವತಿಗೂ ಅನುಕೂಲವಾಗಲಿದೆ ಎಂದರು.

ಇದನ್ನೂ ಓದಿ: ಕೇಂದ್ರ ಬಜೆಟ್‌ ರೈತರಿಗೆ ಸಹಾಯವಾಗಲಿದೆ: ಬಿವೈ ವಿಜಯೇಂದ್ರ

Leave a Reply

Your email address will not be published. Required fields are marked *