NEET-UG: ಗೆಸ್ ಪೇಪರ್‌ನಿಂದ ಬಯಲಾಯ್ತು ನೀಟ್ ಹಗರಣ, ಆತಂಕದಲ್ಲಿ ವಿದ್ಯಾರ್ಥಿಗಳ ಭವಿಷ್ಯ
ವೈದ್ಯಕೀಯ ಆಕಾಂಕ್ಷಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ನೀಟ್ (NEET-UG) ಪರೀಕ್ಷಾ ಅಕ್ರಮದ ತನಿಖೆ ಈಗ ಸಿಬಿಐ ಕೈಗೆ ಸೇರಿದೆ. ಮೇ 3ರಂದು ನಡೆದಿದ್ದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರೀಕ್ಷೆಯನ್ನು ರದ್ದುಗೊಳಿಸುವ ಮಹತ್ವದ ತೀರ್ಮಾನ ಕೈಗೊಂಡಿದೆ. ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆ ಉಳಿಸಿಕೊಳ್ಳಲು ಮತ್ತು 22.7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಈ ನಿರ್ಧಾರ ಅನಿವಾರ್ಯವಾಗಿತ್ತು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತಿಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಾದಿ ತನಿಖಾ ಸಂಸ್ಥೆಗಳ…
