Shalini Rajneesh: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್ ವ್ಯವಸ್ಥೆ, ಅಧಿಕಾರಿಗಳಿಗೆ ಶಾಲಿನಿ ರಜನೀಶ್ ಖಡಕ್ ಸೂಚನೆ
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಭೇಟಿ ನೀಡಿದ್ದು, ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡಿದ್ದಾರೆ. ಹೊಸ ಪಾರ್ಕಿಂಗ್ ವ್ಯವಸ್ಥೆ ಪರಿಶೀಲನೆವಿಮಾನ ನಿಲ್ದಾಣದಲ್ಲಿ ಜಾರಿಗೆ ತರಲಾದ ಹೊಸ ಪಾರ್ಕಿಂಗ್ ಮತ್ತು ನೋಂದಣಿ ವ್ಯವಸ್ಥೆಯಿಂದ ಪ್ರಯಾಣಿಕರಿಗೆ ಎದುರಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಇಂದು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಟರ್ಮಿನಲ್-1ರ ಆಗಮನ ದ್ವಾರದ ಬಳಿ ವಾಹನಗಳ ಅಸ್ತವ್ಯಸ್ತ ಸಂಚಾರ ಹಾಗೂ ದಟ್ಟಣೆಯಿಂದ ಪ್ರಯಾಣಿಕರಿಂದ ದೂರುಗಳು ಹೆಚ್ಚಾದ…
