West Bengal: ಬಂಗಾಳದಲ್ಲಿ ಬಿಸಿಯೂಟದಿಂದ ಮೊಟ್ಟೆ ಔಟ್, ಪನೀರ್ ಇನ್?: ಡೆರೆಕ್ ಒಬ್ರಿಯಾನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ಇಸ್ಕಾನ್ ಸಂಸ್ಥೆ!
ಕೋಲ್ಕತಾ: ಪಶ್ಚಿಮ ಬಂಗಾಳದ (West Bengal) ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಊಟದ ಮೆನುವಿನಿಂದ ಮೊಟ್ಟೆಯನ್ನು ತೆಗೆದುಹಾಕಲಾಗುತ್ತದೆ ಎಂಬ ವದಂತಿಗಳು ಇಡೀ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿವೆ. ಈ ವರದಿಗಳ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (TMC) ರಾಜ್ಯಸಭಾ ನಾಯಕ ಡೆರೆಕ್ ಒಬ್ರಿಯಾನ್ ಅವರು ಬುಧವಾರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹೊಸ ಸರ್ಕಾರವು ಶಾಲಾ ಮಕ್ಕಳ ಪೌಷ್ಟಿಕಾಂಶವನ್ನು ಕಸಿದುಕೊಳ್ಳುತ್ತಿದೆ ಮತ್ತು ಬಂಗಾಳದಲ್ಲಿ ಬಲವಂತವಾಗಿ ‘ಸಸ್ಯಾಹಾರವನ್ನು ಹೇರಲು’ ಯತ್ನಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇಸ್ಕಾನ್ ಸಂಸ್ಥೆಗೆ…
