KH Muniyappa: ಅನರ್ಹ ಪಡಿತರ ಚೀಟಿಗಳಿಗೆ ಬ್ರೇಕ್: ರಾಜ್ಯದಲ್ಲಿ 7.76 ಲಕ್ಷ ಬಿಪಿಎಲ್ ಕಾರ್ಡ್‌ಗಳು ನಿಯಮಬಾಹಿರ; ಸಚಿವ ಮುನಿಯಪ್ಪ ಮಹತ್ವದ ಮಾಹಿತಿ!
ಬೆಂಗಳೂರು: ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಬಿಪಿಎಲ್ ರೇಷನ್ ಕಾರ್ಡ್‌ಗಳ ಪರಿಷ್ಕರಣೆ ಕುರಿತಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ಮಹತ್ವದ ಅಂಕಿ-ಅಂಶಗಳನ್ನು ಹಂಚಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ನಿಯಮಾವಳಿ ಹಾಗೂ ಅಧಿಕೃತ ಮಾರ್ಗಸೂಚಿಗಳನ್ನು ಆಧರಿಸಿ ರಾಜ್ಯದಲ್ಲಿ ಒಟ್ಟು 7.76 ಲಕ್ಷ ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ಗುರುತಿಸಲಾಗಿದೆ ಎಂದು ಅವರು ಪ್ರಕಟಿಸಿದ್ದಾರೆ. ಸರ್ಕಾರದ ಸೌಲಭ್ಯಗಳು ದುರುಪಯೋಗವಾಗದೆ, ಕೇವಲ ನೈಜ ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಬೇಕು ಎನ್ನುವ ನಿಟ್ಟಿನಲ್ಲಿ ಈ ಕಠಿಣ…
