Pavitra Gowda: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡಗೆ ಕೊಂಚ ನಿರಾಳತೆ: ಬ್ಯಾರಕ್ ಬದಲಾವಣೆಗೆ ಹಸಿರು ನಿಶಾನೆ ತೋರಿದ ಕೋರ್ಟ್!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A1) ಪವಿತ್ರಾ ಗೌಡ (Pavitra Gowda) ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೈಲಿನಲ್ಲಿ ತಮಗೆ ಎದುರಾಗುತ್ತಿದ್ದ ಸಾಲು ಸಾಲು ಆರೋಗ್ಯ ಸಮಸ್ಯೆಗಳು ಹಾಗೂ ಕಿರಿಕಿರಿಯಿಂದ ಬೇಸತ್ತು, ಬ್ಯಾರಕ್ ಬದಲಾವಣೆ ಮಾಡುವಂತೆ ಅವರು ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ 59ನೇ ಸೆಷನ್ಸ್ ನ್ಯಾಯಾಲಯವು ಪವಿತ್ರಾ ಗೌಡಗೆ ಕೊಂಚ ಸಮಾಧಾನ ತರುವಂತಹ ಮಹತ್ವದ ಸೂಚನೆಯನ್ನು ನೀಡಿದೆ. ಬೇರೆ ಬ್ಯಾರಕ್‌ಗೂ ಸ್ಥಳಾಂತರಿಸಲು…
