Tamil Nadu: ವಿಶ್ವಾಸಮತ ಗೆದ್ದ ಬೆನ್ನಲ್ಲೇ ನೌಕರರ ಕೈ ಹಿಡಿದ ವಿಜಯ್; ಜನವರಿ 1ರಿಂದಲೇ ಪೂರ್ವಾನ್ವಯವಾಗಲಿದೆ ಡಿಎ ಏರಿಕೆ.
ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ಸಂಖ್ಯಾಬಲ ಸಾಬೀತುಪಡಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ವಿಜಯ್ (Tamil Nadu) ಅವರು ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ರಾಜ್ಯದ ಸರ್ಕಾರಿ ಸಿಬ್ಬಂದಿ ಮತ್ತು ನಿವೃತ್ತ ನೌಕರರ ತುಟ್ಟಿಭತ್ಯೆಯನ್ನು (DA) ಶೇ. 2ರಷ್ಟು ಹೆಚ್ಚಿಸಿ ಸಿಎಂ ಆದೇಶ ಹೊರಡಿಸಿದ್ದಾರೆ. 16 ಲಕ್ಷ ಕುಟುಂಬಗಳಿಗೆ ಆಸರೆ ಸರ್ಕಾರದ ಈ ಮಹತ್ವದ ನಿರ್ಧಾರದಿಂದ ರಾಜ್ಯದ ಸುಮಾರು 16 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರು, ಶಿಕ್ಷಕರು ಹಾಗೂ ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಈ ಏರಿಕೆಯೊಂದಿಗೆ ಪ್ರಸ್ತುತ ಇರುವ ಶೇ. 58ರಷ್ಟು…
