POWER SHARING: ಡಿಕೆ ಶಿವಕುಮಾರ್‌ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌, ಸಿಎಂ ಪೋಸ್ಟ್‌ ಸೇಫ್‌?

power sharing breakfast meeting at dk shivakumar house

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ  ಹುದ್ದೆ ವಿಚಾರಕ್ಕೆ (Power Sharing) ಸಂಬಂಧಿಸಿದಂತೆ  ಉಂಟಾಗಿರುವ  ಗೊಂದಲ ನಿವಾರಣೆ ಮಾಡುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು  ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಅವರು ಡಿಕೆಶಿ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡಿದ್ದು, ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದ ನಾಯಕರು

ಸದಾಶಿವನಗರದಲ್ಲಿನ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ  ಸ್ವಾಗತಿಸಲಾಗಿದ್ದು, ಉಭಯ ನಾಯಕರು ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡುವ ಮೂಲಕ  ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎನ್ನುವ ಸಂದೇಶವನ್ನ ರವಾನಿಸಿದ್ದಾರೆ.

ಈ ಹಿಂದೆ ಕಳೆದ ಶನಿವಾರವಷ್ಟೇ, ಡಿ.ಕೆ. ಶಿವಕುಮಾರ್ ಅವರು, ಸಿದ್ದರಾಮಯ್ಯ  ಅವರ ಮನೆಗೆ ಹೋಗಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡಿದ್ದರು. ಇಂದು ಇಂದು  ಸಿದ್ದರಾಮಯ್ಯ , ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಬಂದಿದ್ದು, ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ಮಾಡಿದ್ದಾರೆ.

ಅಲ್ಲದೇ, ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ  ಯಾವುದೇ ಗೊಂದಲವಿಲ್ಲ ಎನ್ನು ಸ್ಪಷ್ಟವಾಗಿ ಹೇಳಿದ್ದು, ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಇಲ್ಲ ಎನ್ನಲಾಗಿದೆ.

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಂತರ ಸಿಎಂ ಹಾಗೂ ಡಿಸಿಎಂ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಈ ಸಮಯದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಡಿಸೆಂಬರ್ 8 ರಿಂದ ಚಳಿಗಾಲದ  ಅಧಿವೇಶನ ಪ್ರಾರಂಭವಾಗಲಿದೆ. ಈ ಸಂಬಂಧ ಕಾರ್ಯತಂತ್ರದ ಬಗ್ಗೆ ಚರ್ಚೆ ಮಾಡಲಾಗಿದೆ. ವಿಪಕ್ಷಗಳು ಯಾವುದೇ ವಿಚಾರ  ಪ್ರಸ್ತಾಪಿಸಿದರೂ ಎದುರಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕ್ರಿಸ್‌ಮಸ್‌ ಹಿನ್ನೆಲೆ ವಿಶೇಷ ಎಕ್ರಪ್ರೆಸ್‌ ರೈಲು ಸಂಚಾರ ಆರಂಭ

ಕಬ್ಬು ಬೆಳೆಗಾರರ ಹೋರಾಟದ ಬಗ್ಗೆ ಸಿಎಂ ಹೇಳಿದ್ದೇನು?

ಅದರ ಹೊತೆಗೆ ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹೋರಾಟದ ಬಗ್ಗೆ ಸಹ ಅವರು ಪ್ರತಿಕ್ರಿಯೆ ಕೊಟ್ಟಿದ್ದು, ಕಬ್ಬು ಬೆಳೆಗೆ ಬೆಲೆ ನಿಗದಿ ವಿಚಾರವಾಗಿ ಮಾಲೀಕರ ಜೊತೆ ಚರ್ಚೆ ಮಾಡಲಾಗುತ್ತದೆ ಎಂದಿದ್ದಾರೆ. ಅಲ್ಲದೇ, ಈ ಮೀಟಿಂಗ್‌ನಲ್ಲಿ ರಾಜ್ಯದ ಅನೇಕ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎಂದಿದ್ದಾರೆ. ಇನ್ನು ಕೇಂದ್ರ ಸರ್ಕಾರ ಎಂಎಸ್‌ಪಿ ನಿಗದಿ ಮಾಡುವಾಗ ಸಾರ್ವಜನಿಕ ವಿತರಣಾ ವ್ಯವಸ್ಥೆ- ಪಿಡಿಎಸ್ ಮಾಡಿದೆ. ಪಿಡಿಎಸ್ ಮೂಲಕ ವಿತರಣೆ ಮಾಡಲು ಆಗುವುದಿಲ್ಲ. ರೈತರು ಎಂಎಸ್‌ಪಿ ನಿಗದಿ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ 54 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಉತ್ಪಾದನೆಯಾಗುತ್ತದೆ . ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆದಿದ್ದಾರೆ. ಎಥೆನಾಲ್ ಹಂಚಿಕೆ ಹಾಗೂ ಎಂಎಸ್ ಪಿ, ಎಫ್ ಆರ್ ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಈ ಬಗ್ಗೆ ಸಂಸದರು ಸಭೆ ಕರೆಯಬೇಕೆಂದು ಮನವಿ ಮಾಡಿದ್ದೇವೆ ಎಂದರು.  ಡಿ.ಕೆ.ಶಿವಕುಮಾರ್, ಪಕ್ಷ ಹಾಗೂ ಸರ್ಕಾರದ ವಿಚಾರ ಸೇರಿದಂತೆ ಪರಿಷತ್ ಸ್ಥಾನದ ಬಗ್ಗೆಯೂ ಚರ್ಚಿಸಲಾಗಿದೆ. ಸರ್ವ ಪಕ್ಷ ಸಭೆ ಬಗ್ಗೆಯೂ ಪ್ರಸ್ತಾಪಿಸಿದ್ದು, ಕೇಂದ್ರದ ಬಳಿ ವಿಪಕ್ಷ ನಾಯಕರನ್ನು ಕರೆದೊಯ್ಯುವ ಬಗ್ಗೆ ಚರ್ಚಿಸಲಾಗಿದೆ. ನಾವು ಮೊದಲಿನಿಂದಲೂ ಒಗ್ಗಟ್ಟಿನಿಂದ ಇದ್ದೇವೆ. ಭಿನ್ನಾಭಿಪ್ರಾಯ ಬರುವ ಪ್ರಶ್ನೆಯಿಲ್ಲ. ಹೈಕಮಾಂಡ್ ನಿರ್ಧಾರವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *