PUC Exam: ಪಿಯುಸಿ ಪ್ರಶ್ನೆಪತ್ರಿಕೆ ಲೀಕ್‌ ಪ್ರಕರಣ, ಕಠಿಣ ನಿಯಮ ಜಾರಿ ಮಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆ

PUC exam paper leak strict rules are taken from education department

ಬೆಂಗಳೂರು: ಪದವಿ ಪೂರ್ವ ಪಿಯು ಪರೀಕ್ಷೆ (PUC Exam) ಪ್ರಶ್ನೆಪತ್ರಿಕೆ ಲೀಕ್ ಆಗಿರುವ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ಮೊಬೈಲ್‌ ಬಳಕೆಗೆ ಬ್ರೇಕ್‌ ಹಾಕಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದ್ದು, ಈ ನಿಟ್ಟಿನಲ್ಲಿ ಅನೇಕ ನಿಯಮಗಳನ್ನ ಜಾರಿ ಮಾಡಿದೆ.

ಮಹತ್ವದ ನಿರ್ಧಾರ ಮಾಡಿದ ಇಲಾಖೆ

ಪರೀಕ್ಷೆ ಸಮಯದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನ ಜಾರಿ ಮಾಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಯೋಚಿಸಿದ್ದು, ಈ ಹಿನ್ನಲೆಯಲ್ಲಿ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ಪಿಯುಸಿ ಪ್ರಶ್ನೆ ಪತ್ರಿಕೆ ಲೀಕ್‌ ಆಗಿರುವ ಹಿನ್ನಲೆಯಲ್ಲಿ  ಸ್ಮಾರ್ಟ್ ಪೋನ್ ಬಳಕೆಗೆ ಕಡಿವಾಣ ಹಾಕಲು ಅನೇಕ ನಿಯಮಗಳನ್ನ ಜಾರಿಗೆ ತಂದಿದ್ದು, ಪರೀಕ್ಷೆ ಸಮಯದಲ್ಲಿ ಶಿಕ್ಷಕರೂ ಸಹ ಮೊಬೈಲ್‌ ಬಳಕೆ ಮಾಡುವಂತಿಲ್ಲ ಎಂದು ಆದೇಶ ನೀಡಿದೆ.

ಕ್ಯಾಂಪಸ್ ನಲ್ಲಿ ಮೊಬೈಲ್ ಬಳಕೆಗೆ ನಿಷೇಧ

ಇದಿಷ್ಟೇ ಅಲ್ಲದೇ, ಮುಖ್ಯವಾಗಿ ವಿದ್ಯಾರ್ಥಿಗಳು ಕ್ಯಾಂಪಸ್ ನಲ್ಲಿ ಮೊಬೈಲ್ ಬಳಕೆಗೆ ಕಂಪ್ಲೀಟ್ ನಿಷೇಧ ಹೇರಲಾಗಿದ್ದು, ಪರೀಕ್ಷಾ ಕೊಠಡಿಯಲ್ಲಿ ಶಿಕ್ಷಕರು ಕೂಡ ಮೊಬೈಲ್‌ ಬಳಕೆ ಮಾಡಬಹುದು, ವಿದ್ಯಾರ್ಥಿಗಳು ಮೊಬೈಲ್‌ ಬಳಕೆ ಮಾಡಬಾರದು ಸೇರಿದಂತೆ ಕಠಿಣ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ.

ಇದೇ ಜನವರಿ 27ರಿಂದ ನಡೆಯಲಿರಯವ ಎರಡನೇ ಹಂತದ ಪಿಯು ರಾಜ್ಯಮಟ್ಟದ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ತಡೆಯಲು ಈ ನಿಯಮಗಳನ್ನ ಜಾರಿ ಮಾಡಲಾಗಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ಮೊದಲ ಬಾರಿಗೆ ಸಮಗ್ರ ರೊಬೊಟಿಕ್ ಶಸ್ತ್ರಚಿಕಿತ್ಸೆ ಪ್ರಾರಂಭ

Leave a Reply

Your email address will not be published. Required fields are marked *